ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮಕೈಗೊಂಡಿದ್ದು, ಪರಾಮರ್ಶೆ ನಡೆಸಲು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಿದೆ.
ಸಮಿತಿಯಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ, ಕಾನೂನು ಸಚಿವ ಹೆಚ್.ಕೆ. ಪಾಟೀಲ್, ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ, ಲೋಕಯೋಗಿ ಸಚಿವ ಸತೀಶ್ ಜಾರಕಿಹೊಳಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ, ಕ್ರೀಡಾ ಸಚಿವ ಬಿ. ನಾಗೇಂದ್ರ ಸದಸ್ಯರಾಗಿರುತ್ತಾರೆ. ರಾಜ್ಯದಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಸಂಬಂಧ ಸಮಿತಿ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.