ಮಂಡ್ಯ: ಇಲ್ಲಿನ ಮನ್ಮುಲ್ ಡೈರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದ್ದು, ಕಟ್ಟಡ ಬೆಂಕಿಗಾಹುತಿಯಾಗಿದೆ. ಇನ್ನೂ, ಮಾಧ್ಯಮದವರಿಗೆ ಅಲ್ಲಿನ ಸಿಬ್ಬಂದಿ ಅವಾಜ್ ಹಾಕಿ ಚಿತ್ರೀಕರಣ ಮಾಡದಂತೆ ತಡೆಯೊಡ್ಡಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರು ಹೊರವಲಯದಲ್ಲಿರುವ ಪಟಾಕಿ ಅಂಗಡಿ ಮತ್ತು ಗೋದಾಮಿನಲ್ಲಿ ಶನಿವಾರ ಸಂಭವಿಸಿದ ಅಗ್ನಿ ದುರಂತದಲ್ಲಿ 14 ಜನರು ಸಜೀವ ದಹನವಾದ ಒಂದು ದಿನದ ನಂತರ ಈ ಘಟನೆ ನಡೆದಿದೆ. ಅತ್ತಿಬೆಲೆಯ ಪಟಾಕಿ ಅಂಗಡಿಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ಕೋಟ್ಯಂತರ ಮೌಲ್ಯದ ಪಟಾಕಿಗಳು ಸುಟ್ಟುಹೋಗಿವೆ. ಘಟನೆಯಲ್ಲಿ ನಾಲ್ಕು ಬೈಕ್ ಗಳು ಮತ್ತು ಮೂರು ನಾಲ್ಕು ಚಕ್ರದ ವಾಹನಗಳು ಸಂಪೂರ್ಣವಾಗಿ ನಾಶವಾಗಿವೆ.
ಬೆಂಗಳೂರಿನ ಹೊರವಲಯದಲ್ಲಿರುವ ಪಟಾಕಿ ಅಂಗಡಿ ಮತ್ತು ಗೋದಾಮಿನಲ್ಲಿ ಶನಿವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಅಂಗಡಿ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.