alex Certify BREAKING : ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ಸಿಐಡಿ ತನಿಖೆಗೆ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ಸಿಐಡಿ ತನಿಖೆಗೆ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಅಗ್ನಿ ದುರಂತ ಸಂಭವಿಸಿ 14 ಜನರು ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಟಾಕಿ ಗೋಡೌನ್ ನಲ್ಲಿ ಬೆಂಕಿ ದುರಂತ ದುರದೃಷ್ಟಕರ. ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗುವುದು ಎಂದು ತಿಳಿಸಿದರು.

ದುರಂತದಲ್ಲಿ 14 ಜನರು ಸಜೀವ ದಹನಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. ಗೋಡೌನ್ ನಲ್ಲಿ ಕೆಲಸ ಮಾಡುತ್ತಿದ್ದವರಲ್ಲಿ ಹಲವರು ವಿದ್ಯಾರ್ಥಿಗಳು. ರಜೆ ಸಮಯದಲ್ಲಿ ದುಡಿಮೆಗಾಗಿ ಇಲ್ಲಿಗೆ ಬಂದಿದ್ದಾರೆ. ಈ ಘಟನೆ ನಡೆದಿರುವುದು ದು:ಖಕರ. ಪ್ರಕರಣ ಸಂಬಂಧ ಈಗಾಗಲೇ ಪಟಾಕಿ ಗೋಡೌನ್ ಮಾಲೀಕ ರಾಮಸ್ವಾಮಿ ರೆಡ್ಡಿ, ಪುತ್ರ ನವೀನ್, ಕಟ್ಟಡದ ಮಾಲೀಕ ಅನಿಲ್ ನನ್ನು ಬಂಧಿಸಲಾಗಿದೆ.

ತಮಿಳುನಾಡಿನಿಂದ ಟ್ರಕ್ ನಲ್ಲಿ ಪಟಾಕಿಯನ್ನು ತರಲಾಗಿದೆ. ಶನಿವಾರ ಮಧ್ಯಾಹ್ನ 3.15 ರಿಂದ 3.30ರ ಸಮಯದಲ್ಲಿ ಈ ದುರಂತ ಸಂಭವಿಸಿದೆ ಎಂದರು.

ಬೆಂಕಿ ದುರಂತಕ್ಕೆ ನಿಖರವಾಗಿ ಕಾರಣ ಇನ್ನೂ ತಿಳಿದುಬಂದಿಲ್ಲ. ವಿದ್ಯುತ್ ತಂತಿ ಅಥವಾ ಯುಪಿಎಸ್ ನಿಂದ ಘಟನೆ ನಡೆದಿರಬಹುದು ಎನ್ನಲಾಗುತ್ತಿದೆ. ಗೋಡೌನ್ ನಲ್ಲಿ ಸುರಕ್ಷತಾ ಕ್ರಮ ಕೈಗೊಂಡಿರಲಿಲ್ಲ ಎಂಬ ಬಗ್ಗೆಯೂ ಮಾಹಿತಿ ಇದೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...