ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಮನೆಯ ಯಜಮಾನಿಯರಿಗೆ ಮೊದಲ ಕಂತಿನ ಹಣ ಖಾತೆಗೆ ವರ್ಗಾವಣೆಯಾಗಿದ್ದು, ಇದೀಗ 2 ನೇ ಕಂತಿನ ಹಣ ಅಕ್ಟೋಬರ್ 2 ನೇ ವಾರದಲ್ಲಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ ರಾಜ್ಯದ 1.26 ಕೋಟಿ ಮಹಿಳೆಯರಿಗೆ ಗೃಹಲಕ್ಷೀ ಯೊಜನೆ ಜಾರಿ ಮಾಡಲಾಗಿದೆ. ಇದರಲ್ಲಿ 1.10 ಕೋಟಿ ಜನರಿಗೆ ತಲಾ ರೂ.2000 ಹಣವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಇನ್ನೂ 16 ಲಕ್ಷ ಜನರಿಗೆ ಬ್ಯಾಂಕ್ ಖಾತೆ ಹಾಗೂ ಆಧಾರ್ ಜೋಡಣೆ ತೊಂದರೆಯಿಂದ ಹಣ ಜಮೆ ಆಗಿರುವುದಿಲ್ಲ.
ಅಕ್ಟೋಬರ್ 2 ನೇ ವಾರದಲ್ಲಿ ಗೃಹಲಕ್ಷ್ಮಿ ಹಣವನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಮೊದಲ ಕಂತು ಖಾತೆಗೆ ಬಾರದಿರುವ ಮಹಿಳೆಯರು ಬ್ಯಾಂಕ್ ಖಾತೆ ಹಾಗೂ ಆಧಾರ್ ಜೋಡಣೆ ಸಮಸ್ಯೆ ಸರಿಪಡಿಸಿಕೊಂಡೆರೆ ಎರಡೂ ಕಂತು ಒಂದೇ ಸಲ ಖಾತೆಗೆ ಜಮಾ ಆಗಲಿದೆ ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ,ಸರ್ಕಾರದಿಂದ ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಿ ಜನರ ಜೀವನ ಮಟ್ಟ ಸುಧಾರಣೆ ಮಾಡಲಾಗುತ್ತಿದೆ. 1.26 ಕೋಟಿ ಮಹಿಳೆಯರಿಗೆ ಗೃಹಲಕ್ಷೀ ಯೊಜನೆ ಜಾರಿ ಮಾಡಲಾಗಿದೆ. ಇದರಲ್ಲಿ 1.10 ಕೋಟಿ ಜನರಿಗೆ ತಲಾ ರೂ.2000 ಹಣವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಇನ್ನೂ 16 ಲಕ್ಷ ಜನರಿಗೆ ಬ್ಯಾಂಕ್ ಖಾತೆ ಹಾಗೂ ಆಧಾರ್ ಜೋಡಣೆ ತೊಂದರೆಯಿಂದ ಹಣ ಜಮೆ ಆಗಿರುವುದಿಲ್ಲ. ಶೀಘ್ರವೇ 16 ಲಕ್ಷ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.