ನವದೆಹಲಿ: ಕೇಂದ್ರೀಯ ಸೆಕೆಂಡರಿ ಶಿಕ್ಷಣ ಮಂಡಳಿ(CBSE) 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ ಎರಡು ಬಾರಿ ನಡೆಸುವ ಬೋರ್ಡ್ ಪರೀಕ್ಷೆ ನಿಯಮ ಕಡ್ಡಾಯವಲ್ಲ. ವಿದ್ಯಾರ್ಥಿಗಳು ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು. ಎಂಬುದು ಅವರ ವಿವೇಚನೆಗೆ ಬಿಟ್ಟ ವಿಚಾರವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಒಂದೇ ಅವಕಾಶದ ಭಯದಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಒತ್ತಡ ನಿವಾರಣೆಗಾಗಿ ವಾರ್ಷಿಕ ಎರಡು ಬಾರಿ ಬೋರ್ಡ್ ಪರೀಕ್ಷೆ ನಡೆಸಲಾಗುವುದು. ಜೆಇಇ ಮಾದರಿಯಲ್ಲಿ 10 ಮತ್ತು 12ನೇ ತರಗತಿಗೆ ವರ್ಷಕ್ಕೆ ಎರಡು ಬಾರಿ ಪರೀಕ್ಷೆಯ ಆಯ್ಕೆಯ ಅವಕಾಶ ಕಲ್ಪಿಸಲಾಗಿದೆ. ಅವರು ಉತ್ತಮ ಅಂಕಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದ್ದು, ಅದು ಕಡ್ಡಾಯವೇನಲ್ಲ, ವಿದ್ಯಾರ್ಥಿಗಳ ವಿವೇಚನೆಗೆ ಬಿಟ್ಟ ವಿಚಾರವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.