HomeKarnatakaರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ: 2 ಜಿಲ್ಲೆಗೆ ಯೆಲ್ಲೋ ಅಲರ್ಟ್, ಕೆಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ

ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ: 2 ಜಿಲ್ಲೆಗೆ ಯೆಲ್ಲೋ ಅಲರ್ಟ್, ಕೆಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯ ಕೆಲವೆಡೆ ಇಂದು ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಇಂದು ಭಾರಿ ಮಳೆ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಕೆಲವೆಡೆ, ಉತ್ತರ ಒಳನಾಡಿನ ಒಂದೆರಡು ಕಡೆ ಹಾಗೂ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು,  ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೂ ಇದೆ ವೇಳೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿತ್ರದುರ್ಗ, ಮಂಡ್ಯ, ಮೈಸೂರು, ಕರಾವಳಿಯ ಉತ್ತರ ಕನ್ನಡ, ಉಡುಪಿ ಸೇರಿ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ ಎರಡು ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ರಾಯಚೂರು, ಗದಗ, ವಿಜಯಪುರ ಜಿಲ್ಲೆಯ ಕೆಲವೆಡೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular