ಬೆಂಗಳೂರು: ಅಕ್ಟೋಬರ್ 9ರಿಂದ ಪಿಜಿ ವೈದ್ಯಕೀಯ ಕೋರ್ಸ್ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ. ಸ್ನಾತಕೋತ್ತರ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಫಲಿತಾಂಶ ಪ್ರಕಟಿಸಿದ್ದು, ಅಕ್ಟೋಬರ್ 9ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.
ಅಕ್ಟೋಬರ್ 9ರಂದು ಬೆಳಿಗ್ಗೆ 9 ಗಂಟೆಯಿ0ದ ಅಭ್ಯರ್ಥಿಗಳು ಶುಲ್ಕ ಪಾವತಿಸಬಹುದು. ಅಕ್ಟೋಬರ್ 11 ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ. ಕ್ಲಾಸ್ –ವೈ ಅಭ್ಯರ್ಥಿಗಳು ಶುಲ್ಕ ಪಾವತಿಸಿದ ನಂತರ ಮೂಲ ದಾಖಲೆಗಳನ್ನು ಪ್ರಾಧಿಕಾರದ ಕಚೇರಿಗೆ ಸಲ್ಲಿಸಬೇಕು. ಶುಲ್ಕ ಪಾವತಿ ಮತ್ತು ಮೂಲ ದಾಖಲೆ ಸಲ್ಲಿಸಿದ ಬಳಿಕ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶವಿರುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.