HomeKarnatakaಸ್ವಪಕ್ಷದ ವಿರುದ್ಧವೇ ಗುಡುಗಿದ ರೇಣುಕಾಚಾರ್ಯ ಜೆಡಿಎಸ್ ಜತೆಗಿನ ಮೈತ್ರಿ ಬಗ್ಗೆ ಮಹತ್ವದ ಹೇಳಿಕೆ

ಸ್ವಪಕ್ಷದ ವಿರುದ್ಧವೇ ಗುಡುಗಿದ ರೇಣುಕಾಚಾರ್ಯ ಜೆಡಿಎಸ್ ಜತೆಗಿನ ಮೈತ್ರಿ ಬಗ್ಗೆ ಮಹತ್ವದ ಹೇಳಿಕೆ

ಚಿತ್ರದುರ್ಗ: ಬಿಜೆಪಿ ಕಾರ್ಯಕರ್ತರನ್ನೇ ಸರಿಯಾಗಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಬೇರೆಯವರನ್ನು ಟೀಕೆ ಮಾಡಲು ನಮಗೆ ಯಾವ ನೈತಿಕತೆ ಇದೆ. ಮೊದಲಿಗೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ವಿಪಕ್ಷ ನಾಯಕರನ್ನು ಆಯ್ಕೆ ಮಾಡಲಿ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ನೋವಿನಿಂದ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸಭೆ ಚುನಾವಣೆಗೆ ಮೊದಲು ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಆಗಲಿ. ನಾನು ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಪಕ್ಷದ ನಾಯಕರು ಏನು ತೀರ್ಮಾನ ಮಾಡುತ್ತಾರೆ ನೋಡೋಣ. ನಾನು ಕಾಂಗ್ರೆಸ್ ಸೇರುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ನಮ್ಮದೇ ಪಕ್ಷದ ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ನಾಯಕರ ದೌರ್ಬಲ್ಯ ಕಾರಣ ಎಂದು ಅವರು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಮಾತನಾಡಿದ ರೇಣುಕಾಚಾರ್ಯ, ಮೈತ್ರಿ ಎಂದರೆ ಕಾರ್ಯಕರ್ತರ ನಡುವೆ ಸಾಮರಸ್ಯ ಇರಬೇಕು. ಆದರೆ, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ಆಗುತ್ತಿದೆ ಎಂದು ಸ್ವಪಕ್ಷದ ವಿರುದ್ಧವೇ ಗುಡುಗಿದ್ದಾರೆ.

ಜೆಡಿಎಸ್ -ಬಿಜೆಪಿ ಮೈತ್ರಿಗೆ ವಿರೋಧ ಮಾಡಲ್ಲ ಎನ್ನುತ್ತಲೇ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಮತ್ತು ಕಾಂಗ್ರೆಸ್ ವಿರೋಧಿಸಿಕೊಂಡು ಬಂದಿದ್ದಾರೆ. ಈ ಹಿಂದೆ ಜೆಡಿಎಸ್ ನವರು ವಚನಭ್ರಷ್ಟರು ಎಂದು ನಾವೇ ಹೇಳಿದ್ದೆವು. ಅಂಥವರ ಜೊತೆ ಯಾವ ರೀತಿಯ ಮೈತ್ರಿ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ. ರಾಜ್ಯ ನಾಯಕರನ್ನು ಹೊರಗೆ ಇಟ್ಟು ಮೈತ್ರಿ ಆದರೆ ಅದು ಅಪೂರ್ಣ ಆಗುತ್ತದೆ. ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರನ್ನು ಮೈತ್ರಿ ವಿಚಾರದಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ರೇಣುಕಾಚಾರ್ಯ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular