BIGG NEWS : ಸಿದ್ದರಾಮಯ್ಯ ಸರ್ಕಾರ ಜನವಿರೋಧಿಯಾಗಿದೆ : ಮಾಜಿ ಸಚಿವ ಸುಧಾಕರ್ ವಾಗ್ದಳಿ

ಚಿಕ್ಕಬಳ್ಳಾಪುರ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇವಲ 5 ತಿಂಗಳಲ್ಲೇ ಜನ ವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರದ ದರ್ಪದಲ್ಲಿ ಮೆರೆಯುತ್ತಿದ್ದಾರೆ. ಕೇವಲ 5 ತಿಂಗಳಲ್ಲೇ ಸರ್ಕಾರ ಜನ ವಿರೋಧಿಯಾಗಿದೆ. ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಜಾತಿ ಗಣತಿ ವರದಿ ಬಿಡುಗಡೆ  ಮಾಡಿದ್ರೆ ಕೋಲಾಹಲ ಆಗುತ್ತದೆ. ಯಾವ ಉದ್ದೇಶಕ್ಕಾಗಿ ಜಾತಿ ಗಣತಿ ಬಿಡುಗಡೆ  ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ.  ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರ ಆತ್ಮಹತ್ಯೆಗಳು ಹೆಚ್ಚಾಗಿದೆ. ರಾಜ್ಯದಲ್ಲಿ ರೈತರ ಬದುಕಿಗೆ ಗ್ಯಾರಂಟಿ ಇಲ್ಲ. ಕೆಲವು ಗ್ಯಾರಂಟಿಗಳ ಮೂಲಕ ರಾಜ್ಯವನ್ನು ದಿವಾಳಿ ಮಾಡಿದ್ದಾರೆ. ಈಗಾಗಲೇ ಪಂಜಾಬ್ ದಿವಾಳಿ ಆಗಿದೆ. ಸಿದ್ದರಾಮಯ್ಯ ಅಧಿಕಾರದ ಮದದಲ್ಲಿ ನಿದ್ದೆಗೆ ಹೋಗಿದ್ದಾರೆ. ಸಿದ್ದರಾಮಯ್ಯ ಸರ್ಕಾರದ  ಪಾಪದ ಕೊಡ ತುಂಬಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read