ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಹರಿದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್ ಬಳಿ ನಿನ್ನೆ ಸಂಜೆ ಅಪಘಾತ ಸಂಭವಿಸಿದ್ದು, ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಮೃತ ಪಟ್ಟ ಮಗುವನ್ನು ಅಯಾನ್ (3) ಎಂದು ಗುರುತಿಸಲಾಗಿದೆ.