ಬೆಂಗಳೂರು: ಲೋಕೋಪಯೋಗಿ ಇಲಾಖೆ (PWD)ಯಲ್ಲಿ ಬರೋಬ್ಬರಿ 500 ಕೋಟಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿದೆ.
ಲೋಕೋಪಯೋಗಿ ಇಲಾಖೆಯ ಗುಣ ಭರವಸೆ ವಲಯ ಬೆಂಗಳೂರಿನ ಮುಖ್ಯ ಇಂಜಿನಿಯರ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ.
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ 500 ಕೋಟಿ ರೂಪಾಯಿ ಹಗರಣವನ್ನು ಇದೀಗ ಕಾಂಗ್ರೆಸ್ ದ್ಸರ್ಕರ ತನಿಖೆಗೆ ಆದೇಶಿಸಿದೆ. ಇದರಿಂದ ಅಂದಿನ ಲೋಕೋಪಯೋಗಿ ಸಚಿವರಾಗಿದ್ದ ಸಿ.ಸಿ.ಪಟೀಲ್ ಗೆ ಸಂಕಷ್ಟ ಎದುರಾಗಿದೆ.
ಕಳಪೆ ಕಾಮಗಾರಿ, ಅರ್ಹತೆ ಇಲ್ಲದ ಗುತ್ತಿಗೆದರಿಗೆ ಕೋಟ್ಯಂತರ ರೂಪಾಯಿ ಟೆಂಡರ್ ನೀಡಿದ್ದು, ನಕಲಿ ವರ್ಕ್ ಡನ್ ಸರ್ಟಿಫಿಕೇಟ್ ನೀಡಿ ಟೆಂಡರ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ.