alex Certify BIG NEWS: ಹನಿಟ್ರ್ಯಾಪ್ ಹೆಸರಲ್ಲಿ ಬ್ಲ್ಯಾಕ್ ಮೇಲ್; ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಾಜಿ ಕಾರ್ಪೊರೇಟರ್ ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹನಿಟ್ರ್ಯಾಪ್ ಹೆಸರಲ್ಲಿ ಬ್ಲ್ಯಾಕ್ ಮೇಲ್; ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಾಜಿ ಕಾರ್ಪೊರೇಟರ್ ಗಂಭೀರ ಆರೋಪ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಾಜಿ ಕಾರ್ಪೊರೇಟರ್ ಗಂಭೀರ ಆರೋಪ ಮಾಡಿದ್ದು, ಮುನಿರತ್ನ ಹನಿಟ್ರ್ಯಾಪ್ ಹೆಸರಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.

ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಈ ಆರೋಪ ಮಾಡಿದ್ದು, ಮುನಿರತ್ನ ಅಧಿಕಾರಿಗಳ ಮೇಲೆ ಹನಿಟ್ರ್ಯಾಪ್ ಮಾಡಿದ್ದರು. ಮುಖಗವಸು ಹಾಕಿಕೊಂಡು ಮುನಿರತ್ನ ವಿರುದ್ಧ ಆರೋಪ ಮಾಡಿರುವ ಸಂತ್ರಸ್ತೆ ಯಾರೆಂದು ಗೊತ್ತಿಲ್ಲ. ಒಂದೊಮ್ಮೆ ಗೊತ್ತಾದರೆ ಅವರ ಪರ ನಿಲ್ಲುತ್ತೇನೆ ಎಂದಿದ್ದಾರೆ.

ಸಂತ್ರಸ್ತ ಮಹಿಳೆಯೊಬ್ಬರು ಮಾತನಾಡಿರುವ ವಿಡಿಯೋ ನನ್ನ ಗನಕ್ಕೆ ಬಂದಿದ್ದು, ಈ ಬಗ್ಗೆ ಖಾಸಗಿ ಚಾನಲ್ ನವರು ಕೇಳಿದ್ದರು. ನನಗೇನೂ ಗೊತ್ತಿಲ್ಲ ಎಂದಿದ್ದೇನೆ. ಮುನಿರತ್ನ ಈ ರೀತಿ ಸಾಕಷ್ಟು ಸಲ ಮಾಡಿದ್ದಾರೆ ಮುನಿರತ್ನ ಅವರಿಂದ ಅನ್ಯಾಯವಾದ ಸಂತ್ರಸ್ಥರ ಪರ ನಾನು ನಿಲ್ಲುತ್ತೇನೆ ಎಂದಿದ್ದಾರೆ.

ಈ ಹಿಂದೆ ಮುನಿರತ್ನ ಎಫ್ ಎಸ್ ಎಲ್ ಅಧಿಕಾರಿ ಮೇಲೆ ಹನಿಟ್ರ್ಯಾಪ್ ಮಾಡಿಸಿದ್ದರು ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...