HomeKarnatakaದಕ್ಷಿಣ ಒಳನಾಡಿನಲ್ಲಿ ಹೆಚ್ಚಿದ ಮಳೆ: ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ದಕ್ಷಿಣ ಒಳನಾಡಿನಲ್ಲಿ ಹೆಚ್ಚಿದ ಮಳೆ: ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ.

ಹವಾಮಾನ ಇಲಾಖೆ ಇಂದು ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ ಹಾಸನ, ಚಾಮರಾಜನಗರ, ಕೊಡಗು, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ನಿರಂತರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ತಗ್ಗಿದೆ. ಧಾರವಾಡ, ಗದಗ, ಕೊಪ್ಪಳ, ಹಾವೇರಿ ಭಾಗದಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular