HomeKarnatakaಬರಗಾಲ ಹಿನ್ನೆಲೆ ರೈತರ ಕೃಷಿ ಸಾಲ ಮನ್ನಾ ಬಗ್ಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ

ಬರಗಾಲ ಹಿನ್ನೆಲೆ ರೈತರ ಕೃಷಿ ಸಾಲ ಮನ್ನಾ ಬಗ್ಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಕೃಷಿ ಸಾಲ ಮನ್ನಾ ಮಾಡಲಾಗುವುದೇ ಎಂಬುದರ ಕುರಿತಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ಕೃಷಿ ಸಾಲ ಅವಧಿ ವಿಸ್ತರಣೆ ಕುರಿತಾಗಿ ಕೇಂದ್ರವೇ ನಿರ್ಧರಿಸಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೃಷಿ ಸಾಲದ ಬಗ್ಗೆ ಕೇಂದ್ರ ಬರ ಅಧ್ಯಯನ ತಂಡದ ಜೊತೆಗೆ ಚರ್ಚೆ ನಡೆಸಲಾಗಿದೆ. ಕೃಷಿ ಸಾಲ ಮರುಪಾವತಿ ಅವಧಿ ವಿಸ್ತರಣೆ, ಹೊಸ ಸಾಲ ವಿತರಣೆ ಸಂಬಂಧ ಕೇಂದ್ರ ಸರ್ಕಾರವೇ ನಿರ್ಧಾರ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುದ್ದಿಗೋಷ್ಠಿಯಲ್ಲಿ ಅವರು, ಬರಗಾಲದ ಹಿನ್ನೆಲೆಯಲ್ಲಿ ಕೃಷಿ ಸಾಲ ಮನ್ನಾ ಮಾಡಲಾಗುವುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕೃಷಿ ಸಾಲ ವಿಚಾರ ಕುರಿತಾಗಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಚರ್ಚೆ ನಡೆಸಲಾಗಿದ್ದು, ಅಧ್ಯಯನ ತಂಡದ ವರದಿ ಆಧರಿಸಿ ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರದಂತೆ ಮುಂದಿನ ಕ್ರಮ ವಹಿಸುವುದಾಗಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular