HomeIndiaBREAKING NEWS: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆ

BREAKING NEWS: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಮಂಗಳವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಲ್ಶಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ ಕೌಂಟರ್‌ ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೀಡಾದ ಭಯೋತ್ಪಾದಕರನ್ನು ಮೊರಿಫತ್ ಮಕ್ಬೂಲ್ ಮತ್ತು ಅಬ್ರಾರ್ ಅಲಿಯಾಸ್ ಜಾಜಿಮ್ ಫಾರೂಕ್ ಎಂದು ಗುರುತಿಸಲಾಗಿದೆ. ಅವರು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ(ಎಲ್ಇಟಿ) ಭಾಗವಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಶ್ಮೀರಿ ಪಂಡಿತ್ ದಿವಂಗತ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಯೋತ್ಪಾದಕ ಅಬ್ರಾರ್ ಭಾಗಿಯಾಗಿದ್ದಾನೆ ಎಂದು ಕಾಶ್ಮೀರ ಎಡಿಜಿಪಿ ಹೇಳಿದ್ದಾರೆ.

ಅಲ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದ ಬಳಿಕ ಎನ್‌ಕೌಂಟರ್ ಆರಂಭವಾಯಿತು ಎಂದು ಪೊಲೀಸರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular