HomeIndia5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ : ಜೆ.ಪಿ. ನಡ್ಡಾ

5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ : ಜೆ.ಪಿ. ನಡ್ಡಾ

ನವದೆಹಲಿ :  ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಮೀಜರಾಂ, ಛತ್ತೀಸ್ ಗಢ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಈ 5 ರಾ್ಜ್ಯಗಳಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗದ ಘೋಷಣೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸ್ವಾಗತಿಸಿದ್ದಾರೆ. ಅವರು ಐದು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳನ್ನು ರಚಿಸುತ್ತೇವೆ.  ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಬಿಜೆಪಿ ಎಲ್ಲಾ ರಾಜ್ಯಗಳಲ್ಲಿ ಭಾರಿ ಬಹುಮತದೊಂದಿಗೆ ಗೆಲ್ಲುತ್ತದೆ ಎಂದು  ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ ಐದು ವರ್ಷಗಳಲ್ಲಿ, ನಾವು ಜನರ ಆಕಾಂಕ್ಷೆಗಳನ್ನು ಪೂರೈಸಲು ಬದ್ಧತೆಯಿಂದ ಕೆಲಸ ಮಾಡುತ್ತೇವೆ. ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್ ಗಢ, ರಾಜಸ್ಥಾನ ಮತ್ತು ಮಿಜೋರಾಂ ವಿಧಾನಸಭೆಗಳಿಗೆ ನವೆಂಬರ್ 7 ರಿಂದ ವಿವಿಧ ದಿನಾಂಕಗಳಲ್ಲಿ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular