alex Certify BIG NEWS: ಬೆಂಗಳೂರು: ಬಸ್ ನಿಲ್ದಾಣ ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು: ಬಸ್ ನಿಲ್ದಾಣ ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅದೂ ಪೊಲೀಸ್ ಕಮೀಷನರ್ ಕಚೇರಿಯ ಹಿಂಭಾಗವಿದ್ದ ಬಸ್ಟ್ಯಾಂಡ್ ಕಳ್ಳ ತನ ಪ್ರಕರಣ ಮೂರು ದಿನಗಳಿಂದ ಭಾರಿ ಸುದ್ದಿ ಮಾಡಿತ್ತು. ಈ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಪೊಲೀಸ್ ಕಮೀಷನರ್ ಕಚೇರಿಯ ಹಿಂಭಾಗ, ವಿಧಾನಸೌಧದಿಂದ 1 ಕಿ.ಮೀ ಗಿಂತ ಕಡಿಮೆ ದೂರವಿರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನಿರ್ಮಿಸಲಾಗಿದ್ದ ಬಸ್ ತಂಗುದಾಣ ಏಕಾಏಕಿ ನಾಪತ್ತೆಯಾಗಿತ್ತು. ಕಳ್ಳರ್ಯಾರೋ ಬಸ್ ಶೆಲ್ಟರ್ ಅನ್ನೇ ಕದ್ದೊಯ್ದಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.

ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನಿರ್ಮಿಸಲಾಗಿದ್ದ ಬಸ್ ತಂಗುದಾಣ ಕಳ್ಳತನವೂ ಆಗಿಲ್ಲ, ನಿಲ್ದಾಣದ ಶೆಲ್ಟರ್ ನ್ನು ಕಳ್ಳರು ಕೊದ್ದೊಯ್ದೂ ಇಲ್ಲ. ಬದಲಾಗಿ ಬಿಬಿಎಂಪಿ ಅಧಿಕಾರಿಗಳು ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಈ ಬಸ್ಟ್ಯಾಂಡ್ ನ್ನು ತೆರವು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಕೂಡ ಸ್ಪಷ್ಟ ಪಡಿಸಿದ್ದು, ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಇಲ್ಲಿನ ಬಸ್ ನಿಲ್ದಾಣವನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...