HomeKarnatakaಬಿರಿಯಾನಿ ಹೋಟೆಲ್ ಗಳ ಮೇಲೆ IT ಅಧಿಕಾರಿಗಳ ದಿಢೀರ್ ದಾಳಿ

ಬಿರಿಯಾನಿ ಹೋಟೆಲ್ ಗಳ ಮೇಲೆ IT ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಬಿರಿಯಾನಿ ಹೋಟೆಲ್ ಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ.

ಹೊಸಕೋಟೆ ಬಳಿಯ ಹಲವು ಬಿರಿಯಾನಿ ಹೋಟೆಲ್ ಗಳ ಮೇಲೆ 50ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿದೆ. ಹೋಟೆಲ್ ಮಾಲಿಕರ ವಿರುದ್ಧ ಜಿಎಸ್ ಟಿ ವಂಚನೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೋಟೆಲ್ ಗಳಲ್ಲಿ ಯುಪಿಐ ಪಾವತಿ ಖಾತೆಗಳನ್ನು ಬದಲಾಯಿಸಿ ವಹಿವಾಟು ನಡೆದಿರುವ ಆರೋಪ ಕೇಳಿಬಂದಿದೆ. ಅಲ್ಲದೇ ವಹಿವಾಟಿನ ಲೆಕ್ಕಪತ್ರ ಅಸಮರ್ಪಕ ನಿರ್ವಹಣೆ ಬಗ್ಗೆಯೂ ಕೇಳಿಬಂದಿದೆ. ವಿವಿಧ ಹೋಟೆಲ್ ಗಳು, ಹೋಟೆಲ್ ಮಾಲಿಕರ ಮನೆಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ. ದಾಳಿ ವೇಳೆ 1.47 ಕೋಟಿ ನಗದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular