HomeEntertainmentಅಕ್ಟೋಬರ್ 13ಕ್ಕೆ ಬಿಡುಗಡೆಯಾಗಲಿದೆ 'ಶುಗರ್ ಫ್ಯಾಕ್ಟರಿ' ಚಿತ್ರದ ವಿಡಿಯೋ ಹಾಡು

ಅಕ್ಟೋಬರ್ 13ಕ್ಕೆ ಬಿಡುಗಡೆಯಾಗಲಿದೆ ‘ಶುಗರ್ ಫ್ಯಾಕ್ಟರಿ’ ಚಿತ್ರದ ವಿಡಿಯೋ ಹಾಡು

ನವೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿರುವ ಶುಗರ್ ಫ್ಯಾಕ್ಟರಿ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದೇ ಅಕ್ಟೋಬರ್ 13ರಂದು ವಿಡಿಯೋ ಹಾಡನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ದೀಪಕ್ ಅರಸ್ ನಿರ್ದೇಶನದ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕ ನಟನಾಗಿದ್ದು ಅದ್ವಿತ ಶೆಟ್ಟಿ, ಸೋನಾಲ್ ರೂಹಾನಿ ಶೆಟ್ಟಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೋಮ್ಯಾಂಟಿಕ್ ಡ್ರಾಮ ಕಥಾಂದರ ಹೊಂದಿರುವ ಈ ಚಿತ್ರವನ್ನು ಬಾಲಮಣಿ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಆರ್ ಗಿರೀಶ್ ನಿರ್ಮಾಣ ಮಾಡಿದ್ದಾರೆ. ಸಂತೋಷ್ ಛಾಯಾಗ್ರಾಹಣವಿದ್ದು, ಕೆ ಎಂ ಪ್ರಕಾಶ್ ಸಂಕಲನವಿದೆ. ಕಬೀರ್ ರಫಿ ಸಂಗೀತ ಸಂಯೋಜನೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular