HomeKarnatakaಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ 8 ಜನರು; ಲೈಫ್ ಗಾರ್ಡ್ ಸಿಬ್ಬಂದಿಗಳಿಂದ ರಕ್ಷಣೆ

ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ 8 ಜನರು; ಲೈಫ್ ಗಾರ್ಡ್ ಸಿಬ್ಬಂದಿಗಳಿಂದ ರಕ್ಷಣೆ

ಗೋಕರ್ಣ: ಪ್ರವಾಸಕ್ಕೆಂದು ಹೋಗಿ ಸಮುದ್ರದ ಅಲೆಗಳಿಗೆ ಸಿಲುಕಿ ನೀರು ಪಾಲಾಗುತ್ತಿದ್ದ 8 ಜನರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ನಡೆದಿದೆ.

ಹುಬ್ಬಳ್ಳಿಯಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಕುಟುಂಬದ ಸದಸ್ಯರು ಸಮುದ್ರದಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಅಪಾಯಕ್ಕೆ ಸಿಲುಕಿದ್ದರು. ರಕ್ಷಣೆಗಾಗಿ ಮೊರೆಯಿಡುತ್ತಿದ್ದರು. ಇದನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ ತಕ್ಷಣ 8 ಜನರನ್ನು ರಕ್ಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಶುರಾಮ(44), ರುಕ್ಮಿಣಿ (38), ಧೀರಜ್ (14), ಅಕ್ಷರ (14), ಖುಷಿ(13), ದೀಪಿಕಾ(12), ನಂದಕಿಶೋರ್ (10)ಹಾಗೂ ಎಲ್ ವಿ ಪಾಟೀಲ್ (30) ಎಂಬುವವರನ್ನು ರಕ್ಷಿಸಲಾಗಿದೆ.

ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular