HomeKarnatakaBIG NEWS: ಸಿಎಂ ಮನೆ ಮೇಲೆ ಕಲ್ಲೆಸೆದ ಪ್ರಕರಣ ಬಗ್ಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಮಾಹಿತಿ

BIG NEWS: ಸಿಎಂ ಮನೆ ಮೇಲೆ ಕಲ್ಲೆಸೆದ ಪ್ರಕರಣ ಬಗ್ಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಮಾಹಿತಿ

ಮೈಸೂರು: ಮೈಸೂರಿನಲ್ಲಿ ಸಿಎಂ ಮನೆ ಮೇಲೆ ಕಲ್ಲು ಎಸೆದವ ಮಾನಸಿಕ ಅಸ್ವಸ್ಥನಲ್ಲ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ.

ಆತ ಮಾನಸಿಕ ಅಸ್ವಸ್ಥ ಎಂಬುದಕ್ಕೆ ಯಾವುದೇ ಅಧಿಕೃತ ದಾಖಲೆ ಇಲ್ಲ. ಹೀಗಾಗಿ ಕಲ್ಲು ಎಸೆದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ದ್ವಿಚಕ್ರ ವಾಹನದಲ್ಲಿ ಬಂದು ಮುಖ್ಯಮಂತ್ರಿಗಳ ಮನೆ ಮೇಲೆ ಕಲ್ಲು ಎಸೆದಿದ್ದು, ತಡೆಯಲು ಮುಂದಾದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ. ನಂತರ ಆತನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿಗಳ ಮನೆ ಮೇಲೆ ಕಲ್ಲೆಸೆಯಲು ಯಾರಾದರೂ ಹೇಳಿಕೊಟ್ಟಿದ್ದಾರಾ? ಕಲ್ಲು ತೋರಿದವನ ಹಿನ್ನೆಲೆ ಏನು ಎಂಬುದರ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ರಮೇಶ್ ಬಾನೋತ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular