ಒಂದೇ ಕುಟುಂಬದ ಮೂವರ ಸಜೀವ ದಹನ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬರು ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪದ ಕಂಕೊಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಒಂದೇ ಕುಟುಂಬದ ಮೂವರು ಸದಸ್ಯರು ಸಜೀವ ದಹನವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮತ್ತೊಬ್ಬರು ಸಾವನ್ನಪ್ಪಿದ್ದಾರೆ.

ರಾಘವೇಂದ್ರ ಕೇಕುಡ(65), ಅವರ ಪತ್ನಿ ನಾಗರತ್ನ(55), ಹಿರಿಯ ಪುತ್ರ ಶ್ರೀರಾಮ್(30) ಭಾನುವಾರ ಮೃತಪಟ್ಟಿದ್ದು, ಅವರ ದೇಹಗಳು ಸುಟ್ಟು ಕರಕಲಾಗಿ ಗುರುತು ಸಿಗದಂತಾಗಿದ್ದವು. ಘಟನೆಯಲ್ಲಿ ಕಿರಿಯ ಪುತ್ರ ಭರತ್(28) ಅವರಿಗೆ ಶೇ. 50 ಕ್ಕೂ ಅಧಿಕ ಸುಟ್ಟ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭರತ್ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಮನೆಯ ಕೊಠಡಿಯಲ್ಲಿ ಕಟ್ಟಿಗೆ ರಾಶಿ ಹಾಕಿ ಕುಟುಂಬ ಸದಸ್ಯರೇ ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್.ಪಿ. ಮಿಥುನ್ ಕುಮಾರ್, ಡಿ.ವೈ.ಎಸ್.ಪಿ. ಗಜಾನನ ವಾಮನ ಸುತಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಾಸಕ ಹಾಗೂ ಮಾಜಿ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ ಕೂಡ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದರು. ಒಂದೇ ಕುಟುಂಬದ ನಾಲ್ವರ ಸಾವಿಗೆ ಕಾರಣ ನಿಗೂಢವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read