HomeKarnataka`ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಅಕ್ಟೋಬರ್ ತಿಂಗಳ ಪಡಿತರ ಜೊತೆಗೆ 5 ಕೆಜಿ...

`ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಅಕ್ಟೋಬರ್ ತಿಂಗಳ ಪಡಿತರ ಜೊತೆಗೆ 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ

ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಅಕ್ಟೋಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14ಕೆ.ಜಿ ಪ್ರತಿ ಕಾರ್ಡಿಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ 3ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5ಕೆ.ಜಿ ಅಕ್ಕಿ ಬದಲಾಗಿ ಡಿ.ಬಿ.ಟಿ ಮೂಲಕ ಹಣ ವರ್ಗಾವಣೆ ಮಾಡುತ್ತಿದ್ದು,  ಹಣ ಪಡೆಯಲು ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತಮ್ಮ ಬ್ಯಾಂಕ್ ಅಥವಾ ಸ್ಥಳೀಯ ಅಹಾರ ನಿರೀಕ್ಷಕರನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದೆಂದು ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular