alex Certify ವಿದ್ಯಾರ್ಥಿಗಳ ಗಮನಕ್ಕೆ : ‘SSLC’ ಅಂಕಪಟ್ಟಿ ತಿದ್ದುಪಡಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಗಮನಕ್ಕೆ : ‘SSLC’ ಅಂಕಪಟ್ಟಿ ತಿದ್ದುಪಡಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :  ಬೆಂಗಳೂರು : ಎಸ್ ಎಸ್ ಎಲ್ ಸಿ ಅಂಕಪಟ್ಟಿ ತಿದ್ದುಪಡಿಗೆ ಆನ್ ಲೈನ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಅಭ್ಯರ್ಥಿ ತಂದೆ/ತಾಯಿಯ ಹೆಸರು, ಜನ್ಮ ದಿನಾಂಕ ಮತ್ತು ಇತರೆ ತಿದ್ದುಪಡಿಗಳಿದ್ದಲ್ಲಿ ಸಂಬಂಧಿಸಿದ ಶಾಲಾ ಮುಖ್ಯಶಿಕ್ಷಕರ ಮುಖಾಂತರ ಅಗತ್ಯ ದಾಖಲೆ ಮತ್ತು ನಿಗದಿತ ಶುಲ್ಕದೊಂದಿಗೆ ಪ್ರಸ್ತಾವನೆಯನ್ನು ಸಂಬಂಧಿಸಿದ ವಿಭಾಗೀಯ ಕಛೇರಿಗಳಿಗೆ/ಮಂಡಳಿಗೆ ಅಂಚೆ ಮೂಲಕ ಸಲ್ಲಿಸಬೇಕಾಗಿತ್ತು. ವಿಭಾಗೀಯ ಕಛೇರಿಗಳಲ್ಲಿ ಸದರಿ ಪ್ರಸ್ತಾವನೆಗಳನ್ನು ಪರಿಶೀಲಿಸಿ ಅರ್ಹ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ತಿದ್ದುಪಡಿಯನ್ನು ಮಾಡಿ ಸಂಬಂಧಿಸಿದ ಶಾಲೆಗೆ ಭೌತಿಕವಾಗಿ ರವಾನಿಸಲಾಗುತ್ತಿತ್ತು. ಇವರಿಂದ ವಿದ್ಯಾರ್ಥಿಗಳು ಸದರಿ ಪ್ರಮಾಣ ಪತ್ರವನ್ನು ಪಡೆಯಲು ಹೆಚ್ಚಿನ ಕಾಲಾವಕಾಶ ಬೇಕಾಗುತ್ತಿತ್ತು. ಈ ರೀತಿಯ ಪತ್ರ ವ್ಯವಹಾರವನ್ನು ತಡೆಗಟ್ಟಿ ಸದರಿ ಸೇವೆಯನ್ನು ಆನ್‌ಲೈನ್ ಮೂಲಕ ನೀಡುವುದು ಸೂಕ್ತವೆಂದು ಮನಗಂಡು ವಿದ್ಯಾರ್ಥಿಗಳಿಗೆ ಇನ್ನುಮುಂದೆ ಈ ನೂತನ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಅಂಕಪಟ್ಟಿಯಲ್ಲಿ ಅಭ್ಯರ್ಥಿ/ತಂದೆ/ತಾಯಿಯ ಹೆಸರು, ಜನ್ಮ ದಿನಾಂಕ ಮತ್ತು ಇತರೆ ತಿದ್ದುಪಡಿಗಳಿದ್ದಲ್ಲಿ ಪರಿಷ್ಕೃತ ಅಂಕಪಟ್ಟಿಯನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ವಿಧಾನ
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಅಭ್ಯರ್ಥಿ/ತಂದೆ/ತಾಯಿಯ ಹೆಸರು, ಜನ್ಮ ದಿನಾಂಕ ಮತ್ತು ಇತರೆ ತಿದ್ದುಪಡಿಗಳಿದ್ದಲ್ಲಿ, ಅಭ್ಯರ್ಥಿಗಳು ತಾವು ಅಭ್ಯಸಿಸಿದ ಶಾಲೆಯ ಶಾಲಾ ಮುಖ್ಯೋಪಾಧ್ಯಾಯರಿಗೆ ಪೂರಕ ದಾಖಲೆಗಳನ್ನು ಸಲ್ಲಿಸತಕ್ಕದ್ದು. ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಜಾಲಕಾಣದ ಶಾಲಾ ಲಾಗಿನ್ ಮೂಲಕ ಪ್ರಸ್ತಾವನೆಯನ್ನು ಸಲ್ಲಿಸಬಹುದಾಗಿದ್ದು, ನಿಗದಿತ ಶುಲ್ಕವನ್ನು ಆನ್‌ಲೈನ್ ಮುಖಾಂತರ ಅಂದರೆ ಎಲ್ಲಾ ಬ್ಯಾಂಕಿನ ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್, ಮತ್ತು ಇಂಟರ್‌ನೇಟ್ ಬ್ಯಾಂಕಿಂಗ್ ಮೂಲಕ ಅಥವಾ ಈ ಸೌಲಭ್ಯ ಇಲ್ಲದವರು ಆಫ್‌ಲೈನ್‌ನಲ್ಲಿ ಪಾವತಿಸಲು, ಚಲನ್‌ನನ್ನು ಸದರಿ ಜಾಲತಾಣದಲ್ಲಿ ಡೌನ್‌ಲೋಡ್ ಮಾಡಿಕೊಂಡು ಯೂನಿಯನ್ ಬ್ಯಾಂಕ್ನ ಯಾವುದೇ ಶಾಖೆಗಳಲ್ಲಿ ಪಾವತಿಸಬಹುದಾಗಿರುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಸದರಿ ಮಾಹಿತಿಯು ಸಂಬಂಧಿಸಿದ ವಿಭಾಗೀಯ ಕಛೇರಿ/ಮಂಡಲಿಯ ಲಾಗಿನ್ಗೆ ಹೋಗುತ್ತದೆ. ಶಾಲಾ ಮುಖ್ಯೋಪಾಧ್ಯಾಯರು ಅಪ್ಲೋಡ್ ಮಾಡಲಾದ ಅಗತ್ಯ ದಾಖಲೆಗಳನ್ನು ವಿಭಾಗೀಯ/ಮಂಡಳಿ ಕಛೇರಿಗಳಲ್ಲಿ ನಿಯಮಾನುಸಾರ ಪರಿಶೀಲಿಸಿ, ಪ್ರಸ್ತಾವನೆಯು ತಿದ್ದುಪಡಿಗೆ ಅರ್ಹವಿದ್ದಲ್ಲಿ ಸಂಬಂಧಿಸಿದ ವಿದ್ಯಾರ್ಥಿಯ ಹಿಂದಿನ ಮೂಲ ಅಂಕಪಟ್ಟಿಯನ್ನು ವಿಭಾಗೀಯ ಕಛೇರಿ/ಮಂಡಲಿಗೆ ಭೌತಿಕವಾಗಿ ಕಳುಹಿಸುವಂತೆ ಮುಖ್ಯ ಶಿಕ್ಷಕರಿಗೆ ಎಸ್.ಎಂ.ಎಸ್ ಮೂಲಕ ಮಾಹಿತಿ ರವಾನಿಸಲಾಗುವುದು. ಹಿಂದಿನ ಮೂಲ ಅಂಕಪಟ್ಟಿಯನ್ನು ವಿಭಾಗೀಯ ಕಛೇರಿ/ಮಂಡಲಿಗೆ ಸ್ವೀಕೃತವಾದ ನಂತರ ಅದನ್ನು ನಾಶಪಡಿಸಿ, ಪ್ರಸ್ತಾವನೆಯಲ್ಲಿ ಕೋರಿರುವ ತಿದ್ದುಪಡಿಗಳನ್ನು ಅಳವಡಿಸಿ ಪರಿಷ್ಕೃತ ಅಂಕಪಟ್ಟಿಯನ್ನು ಸಂಬಂಧಿಸಿದ ಶಾಲೆಗೆ ಸ್ಪೀಡ್ ಪೋಸ್ಟ್ ಮುಖಾಂತರ ರವಾನಿಸುವುದು, ಆನ್ಲೈನ್ ಮುಖಾಂತರ ಪ್ರಸ್ತಾವನೆಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಪ್ಲೋಡ್ ಮಾಡುವ ದಾಖಲೆಗಳನ್ನು ತಿದ್ದುಪಡಿ/ನಕಲಿ (Forged) ಮಾಡಿದಲ್ಲಿ ಅಂತಹ ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು.

ಮೇಲ್ಕಂಡ ಎಲ್ಲಾ ಪ್ರಕ್ರಿಯೆಗಳ ಕುರಿತು ಶಾಲಾ ಹಂತದಲ್ಲಿ ಮತ್ತು ವಿಭಾಗೀಯ ಕಛೇರಿಯ / ಮಂಡಲಿಯಲ್ಲಿ ಕ್ರಮವಹಿಸುವ ಬಗ್ಗೆ ವಿವರವಾದ User Manual ನ್ನು ಈ ಸುತ್ತೋಲೆಯೊಂದಿಗೆ ಅನುಬಂಧಿಸಿದೆ. ಅದರಂತೆ ರಾಜ್ಯದ ಎಲ್ಲಾ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರು ಮತ್ತು ವಿಭಾಗೀಯ ಕಛೇರಿ/ಮಂಡಲಿಯಲ್ಲಿ ಕ್ರಮವಹಿಸಲು ತಿಳಿಸಿದೆ.

ಆನ್ಲೈನ್ ಮುಖಾಂತರ ಸೇವೆಯನ್ನು ನೀಡಲಾಗುತ್ತಿರುವ ಬಗ್ಗೆ ಅಭ್ಯರ್ಥಿಗಳಿಗೆ/ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ನೀಡುವುದು. ಸದರಿ ಸೇವೆಯನ್ನು ಆನ್ಲೈನ್ ಮುಖಾಂತರ ಪ್ರಕ್ರಿಯೆಗೊಳಿಸಿದರೂ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಈ ಪ್ರಕ್ತಿಯ ಜೊತೆಗೆ ಒಂದು ತಿಂಗಳವರೆಗೆ ಈ ಹಿಂದಿನ ವಿಧಾನದಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಿದಲ್ಲಿ ಸೇವೆಯನ್ನು ಒದಗಿಸಲು ಕ್ರಮವಹಿಸುವುದು, ಅದರ ನಂತರ ಭೌತಿಕವಾಗಿ ಪ್ರಸ್ತಾವನೆ ಸ್ವೀಕರಿಸಲಾಗುವುದಿಲ್ಲ ಎಂದು ಸುತ್ತೋಲೆ ಹೊರಡಿಸಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...