ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು, ದಸರಾ ಉತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭರ್ಜರಿ ಸಿದ್ಧತೆಗಳು ನಡೆದಿವೆ.
ದಸರಾ ಪ್ರಮುಖ ಆಕರ್ಷಣೆ ನಾಡಕುಸ್ತಿಗೆ ಅಖಾಡ ಸಿದ್ಧವಾಗಿದ್ದು, ಅ. 15 ರಂದು ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಲಾಗುತ್ತದೆ. ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಅರಿಶಿಣ, ಪಚ್ಚ ಕರ್ಪೂರ ಸೇರಿ ಹಲವು ವಸ್ತುಗಳ ಮಿಶ್ರಣದಿಂದ ಅಖಾಡವನ್ನು ತಯಾರಿಸಲಾಗಿದೆ. ಅ. 15 ರಂದು ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಲಾಗುತ್ತದೆ. ಕುಸ್ತಿ ಪಂದ್ಯಾವಳಿಯಲ್ಲಿ ಗೆದ್ದವರಿಗೆ ದಸರಾ ಕೇಸರಿ, ದಸರಾ ಕಂಠೀರವ, ದಸರಾ ಕಿಶೋರಿ, ಮತ್ತು ಮೈಸೂರು ಕೇಸರಿ ಸೇರಿ ಹಲವು ಪ್ರಶಸ್ತಿ ನೀಡಲಾಗುತ್ತದೆ.
ಇನ್ನೂ, ಅಕ್ಟೋಬರ್ 18, 19, 20 ಹಾಗೂ 21ರಂದು ನಾಲ್ಕು ದಿನಗಳ ಕಾಲ ಯುವ ದಸರಾ ನಡೆಯಲಿದೆ. ಯುವ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಲಾವಿದರ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಪ್ರತಿಬಾರಿ ಬಾಲಿವುಡ್ ಗಾಯಕರು, ಕಲಾವಿದರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿತ್ತು. ಆದರೆ ಈ ಬಾರಿ ಸ್ಥಳೀಯ ಕಲಾವಿದರಿಗೆ ಅವಕಾಶಕೊಡಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ.ನಾಡಹಬ್ಬ ದಸರಾ ಅಕ್ಟೋಬರ್ 15 ರಂದು ಉದ್ಘಾಟನೆಯಾಗಲಿದ್ದು, ಅಕ್ಟೋಬರ್ 24 ರಂದು ವಿಶ್ವವಿಖ್ಯಾತ ಜಂಬೂ ಸವಾರಿಯೊಂದಿಗೆ ಮುಕ್ತಾಯಗೊಳ್ಳಲಿದೆ.