HomeKarnatakaBREAKING : ಡಿಸಿಎಂ ಡಿ.ಕೆ ಶಿವಕುಮಾರ್ ಕಾಲಿಗೆ ಬಿದ್ದು ಅನುದಾನಕ್ಕೆ ಮೊರೆಯಿಟ್ಟ ಶಾಸಕ ಮುನಿರತ್ನ

BREAKING : ಡಿಸಿಎಂ ಡಿ.ಕೆ ಶಿವಕುಮಾರ್ ಕಾಲಿಗೆ ಬಿದ್ದು ಅನುದಾನಕ್ಕೆ ಮೊರೆಯಿಟ್ಟ ಶಾಸಕ ಮುನಿರತ್ನ

ಬೆಂಗಳೂರು : ಆರ್.ಆರ್.ನಗರ ಕ್ಷೇತ್ರಕ್ಕೆ ಅನುದಾನ ಕಡಿತಗೊಳಿಸಿರುವ ಕ್ರಮ ಖಂಡಿಸಿ ಬಿಜೆಪಿ ಶಾಸಕ ಮುನಿರತ್ನ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಏಕಾಂಗಿ ಹೋರಾಟ ನಡೆಸಿದ ಮುನಿರತ್ನ ಬಳಿಕ  ಅರಮನೆ ಮೈದಾನಲ್ಲಿದ್ದ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ. ಈ ವೇಳೆ ಡಿಸಿಎಂ ಡಿಕೆಶಿ ಕಾಲಿಗೆ ಬಿದ್ದು ಮುನಿರತ್ನ ರಾಜರಾಜೇಶ್ವರಿ ನಗರಕ್ಕೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಡಿಸಿಎಂ ಕೂಡ ಶಾಸಕ ಮುನಿರತ್ನ ನೀಡಿದ ಮನವಿ ಸ್ವೀಕರಿಸಿ ಮುನಿರತ್ನ ಹೆಗಲ ಮೇಲೆ ಕೈ ಹಾಕಿ ಆತ್ಮೀಯವಾಗಿ ಮಾತನಾಡಿಸಿದ್ದಾರೆ.

ಮೊದಲು ವಿಧಾನಸೌಧದ ಮುಂಭಾಗ ಗಾಂಧಿ ಪ್ರತಿಮೆ ಬಳಿ ಬೆಂಬಲಿಗರ ಜೊತೆಗೂಡಿ ಶಾಸಕ ಮುನಿರತ್ನ ಧರಣಿ ನಡೆಸಿದ್ದರು . ಈ ವೇಳೆ ಶಾಸಕರನ್ನು ಹೊರತುಪಡಿಸಿ ಬೆಂಬಲಿಗರಿಗೆ ಧರಣಿ ನಡೆಸಲು ಅನುಮತಿಯಿರಲಿಲ್ಲ. ಈ ಹಿನ್ನೆಲೆಯಲ್ಲಿ ಮುನಿರತ್ನ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುನಿರತ್ನ ಪ್ರತಿಭಟನೆಗೆ ಮಾಜಿ ಸಿಎಂ ಯಡಿಯೂರಪ್ಪ ಕೂಡ ಸಾಥ್ ನೀಡಿದ್ದು, ಇದು ದ್ವೇಷದ ರಾಜಕಾರಣ. ಎಲ್ಲಾ ಕ್ಷೇತ್ರಗಳಂತೆ ಆರ್.ಆರ್.ನಗರ ಕ್ಷೇತ್ರಕ್ಕೂ ಅನುದಾನ ಕೊಡಬೇಕು. ಅನುದಾನ ಬಗ್ಗೆ ಮುಖ್ಯಮಂತ್ರಿ, ಡಿಸಿಎಂ ಜೊತೆ ಮಾತನಾಡುತ್ತೇನೆ. ಎಲ್ಲಾ ಶಾಸಕರಿಗೂ ಅನುದಾನ ನೀಡಬೇಕು ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular