HomeKarnatakaRain in Bengaluru : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ : ವಾಹನ ಸವಾರರ...

Rain in Bengaluru : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ

ಬೆಂಗಳೂರು : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.

ಕಲಾಸಿಪಾಳ್ಯ, ಕೆ.ಆರ್.ಮಾರ್ಕೆಟ್, ಜಯನಗರ, ವಿಲ್ಸನ್ಗಾರ್ಡನ್, ಕಾರ್ಪೊರೇಷನ್ ವೃತ್ತ, ಡಬಲ್ ರೋಡ್, ಮೆಜೆಸ್ಟಿಕ್, ಶಾಂತಿನಗರ, ಎಂ.ಜಿ.ರಸ್ತೆ, ವಿವೇಕನಗರ ಮತ್ತು ಕೋರಮಂಗಲ ಸೇರಿದಂತೆ ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಧ್ಯಾಹ್ನದ ನಂತರ ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದ್ದಾರೆ. ಅದೇ ರೀತಿ ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಬೆಂಗಳೂರು, ಕೋಲಾರ ಸೇರಿದಂತೆ ಹಲವು ಕಡೆ ಮೋಡ ಕವಿದ ವಾತಾವರಣವಿದ್ದು ತುಂತುರು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular