HomeKarnataka15 ದಿನ 3 ಸಾವಿರ ಕ್ಯುಸೆಕ್ ನೀರು ಬಿಡಲು CWRC ಆದೇಶ: ರೈತರ ರಕ್ಷಣೆಗೆ ಎಲ್ಲಾ...

15 ದಿನ 3 ಸಾವಿರ ಕ್ಯುಸೆಕ್ ನೀರು ಬಿಡಲು CWRC ಆದೇಶ: ರೈತರ ರಕ್ಷಣೆಗೆ ಎಲ್ಲಾ ಕ್ರಮ: ಡಿಸಿಎಂ ಡಿಕೆ

ಮೈಸೂರು: ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು  ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಆದೇಶ ನೀಡಿದೆ. ತಮಿಳುನಾಡಿನ ಡ್ಯಾಮ್ ನಲ್ಲಿ ಎಷ್ಟು ನೀರಿದೆ ಎಂದು ಮಾಹಿತಿ ಪಡೆದಿದ್ದಾರೆ ಎಂದು ಮೈಸೂರಿನಲ್ಲಿ ಜಲ ಸಂಪನ್ಮೂಲ ಇಲಾಖೆ ಸಚಿವರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕರ್ನಾಟಕದ ಜಲಾಶಯಗಳಿಗೆ 7-10 ಸಾವಿರ ಕ್ಯುಸೆಕ್ ಒಳಹರಿವು ಇದೆ. ನಮ್ಮ ರೈತರ ರಕ್ಷಣೆಗೆ ಎಲ್ಲಾ ವ್ಯವಸ್ಥೆ ಮಾಡಿದ್ದೇವೆ. ಬಿಳಿಗುಂಡ್ಲು ಜಲಮಾಪನ ಕೇಂದ್ರಕ್ಕೆ ಎರಡು ದಿನ ಕಡಿಮೆ ನೀರು ಹೋಗಿದೆ. ಬೆಂಗಳೂರಿನಲ್ಲಿ ಮಳೆಯಾದ ಕಾರಣ ಅದು ಬ್ಯಾಲೆನ್ಸ್ ಆಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮನದಟ್ಟು ಮಾಡಿ ಕೊಟ್ಟಿದ್ದೇವೆ. ಏನೇ ಆದೇಶ ಬಂದರೂ ನಮ್ಮ ರೈತರ ಹಿತ ಕಾಯುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular