HomeLatest NewsBREAKING: ರೋಹಿತ್ ಶರ್ಮಾ ಬ್ಯಾಟಿಂಗ್ ಅಬ್ಬರ: 8 ವಿಕೆಟ್ ಗಳಿಂದ ಆಫ್ಘಾನಿಸ್ತಾನ ಬಗ್ಗು ಬಡಿದ ಭಾರತ

BREAKING: ರೋಹಿತ್ ಶರ್ಮಾ ಬ್ಯಾಟಿಂಗ್ ಅಬ್ಬರ: 8 ವಿಕೆಟ್ ಗಳಿಂದ ಆಫ್ಘಾನಿಸ್ತಾನ ಬಗ್ಗು ಬಡಿದ ಭಾರತ

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ ಭಾರತ 8 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆಫ್ಘಾನಿಸ್ತಾನ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿತು. ಹಷ್ಮತ್ ಉಲ್ಲಾ ಶಾಹಿದಿ 80, ಅಜಮತ್ ಉಲ್ಲಾ ಒಮರಾಜಿ 62 ರನ್ ಗಳಿಸಿದರು. ಭಾರತದ ಪರ ಜಸ್ ಪ್ರೀತ್ ಬೂಮ್ರಾ 4, ಹಾರ್ದಿಕ್ ಪಾಂಡ್ಯ 2 ವಿಕೆಟ್ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

273 ಗೆಲುವಿನ ಗುರಿ ಬೆನ್ನತ್ತಿದ ಭಾರತ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ 35 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 273 ರನ್ ಗಳಿಸಿ ಗೆಲುವಿನ ನಗೆ ಬೀರಿದೆ. ಭಾರತದ ಪರ ರೋಹಿತ್ ಶರ್ಮಾ 131, ಇಶಾನ್ ಕಿಶನ್ 47, ವಿರಾಟ್ ಕೊಹ್ಲಿ ಅಜೇಯ 55, ಶ್ರೇಯಸ್ ಅಯ್ಯರ್ ಅಜೇಯ 25 ರನ್ ಗಳಿಸಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular