HomeKarnatakaBREAKING : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡಿದ್ದ ಯುವಕ ದುರ್ಮರಣ : ಸಾವಿನ ಸಂಖ್ಯೆ 16ಕ್ಕೆ...

BREAKING : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡಿದ್ದ ಯುವಕ ದುರ್ಮರಣ : ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಬೆಂಗಳೂರು : ಅನೇಕಲ್ ಜಿಲ್ಲೆಯ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ .

ಪಟಾಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಎಂಬುವವರು ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ. ಪಟಾಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಿನೇಶ್ ಎಂಬುವವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿನ್ನೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಇದೀಗ ಮೃತಪಟ್ಟವರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ .

ವೆಂಕಟೇಶ್ ಹಾಗೂ ಈತನ ಸ್ನೇಹಿತ ಪಟಾಕಿ ಖರೀದಿಗೆ ತೆರಳಿದ್ದರು. ಅದೇ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ಘಟನೆಯಲ್ಲಿ ವೆಂಕಟೇಶ್ ಸ್ನೇಹಿತ ಪಾರಾಗಿದ್ದರು. ಆದರೆ ವೆಂಕಟೇಶ್ ಬೆಂಕಿಗೆ ಸಿಲುಕಿದ್ದರು.  ಅನೇಕಲ್ ಜಿಲ್ಲೆಯ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತದಲ್ಲಿ ಒಟ್ಟು 16 ಮಂದಿ ಮೃತಪಟ್ಟಿದ್ದಾರೆ. ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದಿದ್ದರಿಂದ ಈ ಘಟನೆ ನಡೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಸಂಬಂಧ ಅನೇಕಲ್ ನ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular