HomeKarnatakaBIG NEWS: ಬಿಜೆಪಿಯ ಎರಡು ಹಾಗೂ ಜೆಡಿಎಸ್ ನ ಒಂದು ವಿಕೇಟ್ ಪತನ; ಮೈತ್ರಿ ಬೆನ್ನಲ್ಲೇ...

BIG NEWS: ಬಿಜೆಪಿಯ ಎರಡು ಹಾಗೂ ಜೆಡಿಎಸ್ ನ ಒಂದು ವಿಕೇಟ್ ಪತನ; ಮೈತ್ರಿ ಬೆನ್ನಲ್ಲೇ ಬಿಗ್ ಶಾಕ್

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ನಿರ್ಲಕ್ಷ ಮಾಡಿದ್ದಕ್ಕೆ ಬಿಜೆಪಿಯಿಂದಲೇ ಹೊರ ಬಂದಿದ್ದ ಶೆಟ್ಟರ್ ಈಗ ಬಿಜೆಪಿಗೆ ಸಿಂಹಸ್ವಪ್ನವಾಗಿದ್ದಾರೆ. ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಾಲು ಸಾಲು ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ.

ಬಿಜೆಪಿಯ ಇಬ್ಬರು ಹಾಗೂ ಜೆಡಿಎಸ್ ನ ಓರ್ವ ಮಾಜಿ ಶಾಸಕರು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ಹಿರಿಯೂರು ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಶಿರಹಟ್ಟಿ ಬಿಜೆಪಿ ಮುಖಂಡ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೊಂದೆಡೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಮೂಡಿಗೆರೆ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕೂಡ ಕಾಂಗ್ರೆಸ್ ಸೇರಲು ಮುಹೂರ್ತ ನಿಗದಿಯಾಗಿದೆ.

ಈ ಮೂಲಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ. ಇಂದು ಬಿಜೆಪಿಯ ರಾಮಪ್ಪ ಲಮಾಣಿ, ಎಂ.ಪಿ.ಕುಮಾರಸ್ವಾಮಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಪೂರ್ಣಿಮಾ ಶ್ರೀನಿವಾಸ್ ಅ.20ರಂದು ಕಾಂಗ್ರೆಸ್ ಸೇರಲು ದಿನಾಂಕ ನಿಗದಿಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular