BREAKING : ಕಾಫಿ ಬೋರ್ಡ್ ನಿರ್ದೇಶಕ ಚಂದ್ರಶೇಖರ್ ಮನೆ ಸೇರಿ ಹಲವೆಡೆ ‘IT’ ದಾಳಿ

ಬೆಂಗಳೂರು : ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ಶಾಕ್ ನೀಡಿದ್ದು, ಕಾಫಿ ಬೋರ್ಡ್ ನಿರ್ದೇಶಕ ಚಂದ್ರಶೇಖರ್ ಮನೆ ಮೇಲೂ ಐಟಿ ದಾಳಿ ನಡೆಸಿದ್ದಾರೆ.

ಮತ್ತಿಕೆರೆಯಲ್ಲಿರುವ ಚಂದ್ರಶೇಖರ್ ನಿವಾಸದ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.  ಚಿನ್ನದ ವ್ಯಾಪಾರಿಗಳ ಜೊತೆ ವ್ಯವಹಾರ ಹಿನ್ನೆಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 15 ಕಡೆ ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ.

ತೆರಿಗೆ ವಂಚನೆ ಸಂಬಂಧ ಕಳೆದ ವಾರ ಚಿನ್ನದ ವ್ಯಾಪಾರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಪತ್ತೆಯಾದ ಹಲವಾರು ದಾಖಲಾತಿ ಆಧಾರದ ಮೇಲೆ ಇದೀಗ ಮತ್ತೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿರಿಯಾನಿ ಸೆಂಟರ್ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read