ಬೆಂಗಳೂರು : ಜಾತಿ ಜನಗಣತಿ ಜಾರಿಗೆ ತರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದ್ದು,
ಇದನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ತೆರೆಮರೆಯಲ್ಲಿ ಸಜ್ಜು ನಡೆಸಲಾಗುತ್ತಿದೆ.
ಕೇಂದ್ರ ಓಬಿಸಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಲಿಂಗಾಯತ ನಾಯಕರು ಪಟ್ಟು ಹಿಡಿದಿದ್ದು, ಲಿಂಗಾಯತ ನಾಯಕರ ಜೊತೆಗೆ ಒಕ್ಕಲಿಗ ನಾಯಕರ ಜೊತೆ ಮಾತುಕತೆ ಕೂಡ ನಡೆಯುತ್ತಿದೆ. ಜಾತಿ ಜನಗಣತಿ ವಿರೋಧಿಸಿ ಜಂಟಿ ಹೋರಾಟಕ್ಕೆ ಸಿದ್ದತೆ ಆರಂಭ ನಡೆದಿದ್ದು, ಜಾತಿ ಜನಗಣತಿ ಜಾರಿಯ ಕ್ರಮಕ್ಕೆ ವಿರೋಧಿಸಿ ಒಕ್ಕಲಿಗ ಸಮಯದಾಯದ ನಾಯಕರು ಹೋರಾಟ ನಡೆಸಲು ಸಜ್ಜಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಜಾತಿ ಗಣತಿ ನಡೆಸಲು ಹಾಗೂ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಜಾತಿ ಗಣತಿಗೆ ಒತ್ತಡ ಹೇರಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಅಲ್ಲದೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ದೇಶಾದ್ಯಂತ ಜಾತಿ ಗಣತಿ ನಡೆಸಲು ನಿರ್ಧರಿಸಲಾಗಿದ್ದು, ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.