HomeKarnatakaಹಿಂದುಳಿದ ವರ್ಗದ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಹಿಂದುಳಿದ ವರ್ಗದ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ :  ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2023-24 ನೇ ಸಾಲಿಗೆ ಅನುಷ್ಟಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ,ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸತು), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು , ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕ್ ಗಳ ಸಹಯೋಗದೊಂದಿಗೆ), ಮತ್ತು ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳಿಗೆ ಸೇರಿದ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು https://sevasindhu.karnataka.in ಸೇವಾಸಿಂಧು ತಂತ್ರಾಂಶದ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅಕ್ಟೋಬರ್ 31 ರೊಳಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಬೆಂಗಳೂರು ಉತ್ತರ ಜಿಲ್ಲೆ, ಬೆಂಗಳೂರು-32 ಅಥವಾ ದೂರವಾಣಿ ಸಂಖ್ಯೆ 080-22374832, 8050770004, 850770005 ನ್ನು ಅಥವಾ ಹೆಚ್ಚಿನ ವಿವರಗಳಿಗಾಗಿ ನಿಗಮದ ವೆಬ್ ಸೈಟ್ www.dbcdc.karnataka.gov.in ಗೆ ಭೇಟಿ ನೀಡಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆಯ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular