ಕಾಂಗ್ರೆಸ್ ನವರಿಂದಲೇ ರಾಜ್ಯ ಸರ್ಕಾರ ಪತನ : ಜಿ.ಟಿ ದೇವೇಗೌಡ ಭವಿಷ್ಯ

ಬೆಂಗಳೂರು : ಕಾಂಗ್ರೆಸ್ ನವರಿಂದಲೇ ಸರ್ಕಾರ ಪತನಗೊಳ್ಳಲಿದೆ ಎಂದು ಜಿಟಿ ದೇವೇಗೌಡ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಜಿಟಿ ದೇವೇಗೌಡ ಬಸವರಾಯ ರೆಡ್ಡಿ ರಾಜ್ಯ ಸರ್ಕಾರದ ವಿರುದ್ಧವೇ ಮಾತನಾಡುತ್ತಾರೆ, ಎಲ್ಲಾ ಶಾಸಕರು ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ. ಕಾಂಗ್ರೆಸ್ ನವರಿಂದಲೇ ಸರ್ಕಾರ ಬೀಳುವುದು ಫಿಕ್ಸ್ ಎಂದಿದ್ದಾರೆ.ಕಾಂಗ್ರೆಸ್ ಸರ್ಕಾರ ಪತನಗೊಂಡು ಹೆಚ್ ಡಿ ಕುಮಾರಸ್ವಾಮಿ ಅವರೇ ಸಿಎಂ ಆಗಲಿದ್ದಾರೆ, ಇದು ನಿಜ ಎಂದು ಜಿ.ಟಿ ದೇವೇಗೌಡ ಹೇಳಿದ್ದಾರೆ.

ಬಿ.ಆರ್.ಪಾಟೀಲ್, ರಾಜು ಕಾಗೆ, ಕಂಪ್ಲಿ ಗಣೇಶ್, ಬಸವರಾಜ ರಾಯರೆಡ್ಡಿ ಸರ್ಕಾರದ ವಿರುದ್ಧವೇ ಮಾತನಾಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ನವರೇ ಸರ್ಕಾರ ಬೀಳಿಸುತ್ತಾರೆ. ಕುಮಾರಣ್ಣ ಅವರನ್ನ ಮುಖ್ಯಮಂತ್ರಿ ಮಾಡಲು ಜೆಡಿಎಸ್ ಪುನಶ್ಚೇತನ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.

ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಯಾರಿಗೂ ನಾವು ಒತ್ತಡ ಹಾಕುತ್ತಿಲ್ಲ ಎಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಅವರೇ ಸ್ವತಹ ಬಂದು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ, ರಾಜ್ಯ, ದೇಶದಲ್ಲಿ ರಾಜಕೀಯ ಧ್ರುವೀಕರಣ ಶುರುವಾಗಿದೆ ಎಂದರು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read