BIG NEWS: ಲೋಡ್ ಶೆಡ್ಡಿಂಗ್: ಬಿಜೆಪಿ ಟೀಕೆಗೆ ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೇ ಬರ ಪರಿಸ್ಥಿತಿ ಎದುರಾಗಿರುವುದರಿಂದ ವಿದ್ಯುತ್ ಕೊರತೆಯಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಲೋಡ್ ಶೆಡ್ದಿಂಗ್ ಬಗ್ಗೆ ಬಿಜೆಪಿ ನಮ್ಮ ಸಕಾರವನ್ನು ಟೀಕಿಸಲು ಅವರು ತಮ್ಮ ಅಧಿಕಾರ ಅವಧಿಯಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಎಷ್ಟು ಪ್ರಮಾಣ ಹೆಚ್ಚಳ ಮಾಡಿದ್ದರು ಎಂಬುದನ್ನು ಹೇಳಲಿ ಎಂದು ಟಾಂಗ್ ನೀಡಿದ್ದಾರೆ.

ಮಳೆಯಾಗಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ. ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದೆ ನಮ್ಮ ಸರ್ಕಾರ ಇದ್ದಾಗ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ನಾವು ಆಗ 10 ರಿಂದ 13 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿದ್ದೆವು. ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಈ ಸ್ಥಿತಿ ಬಂದಿದೆ ಎಂದರು.

ಬರದಿಂದಾಗಿ ಅಣೆಕಟ್ಟುಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿದೆ. ಬರಗಾಲ ಎದುರಾದಾಗ ವಿದ್ಯುತ್ ಉತ್ಪಾದನೆ ಕುಸಿಯುತ್ತದೆ. ಪ್ರತಿವರ್ಷ ಶೇ 10 ರಿಂದ 15 ರಷ್ಟು ಬೇಡಿಕೆ ಹೆಚ್ಚಾಗುವುದು ವಾಡಿಕೆ. ನಮ್ಮ ಸರ್ಕಾರ ಇನ್ನು 10 ಸಾವಿರ ಎಕರೆಯಲ್ಲಿ ಸೋಲಾರ್ ವಿದ್ಯುತ್ ಹಾಗೂ ವಿಂಡ್ ಪವರ್ ಉತ್ಪಾದನೆಗೆ ಕಾರ್ಯಕ್ರಮ ಕೈಗೊಳ್ಳುತ್ತಿದೆ. ರೈತರಿಂದಲೂ ವಿದ್ಯುತ್ ಬೇಡಿಕೆ ಪ್ರಮಾಣ ಹೆಚ್ಚಾಗಿದೆ. ರೈತರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ. ಈಗಾಗಲೇ ಸಚಿವರು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read