HomeKarnatakaಕೊಳಗೇರಿ ನಿವಾಸಿಗಳಿಗೆ ಭರ್ಜರಿ ಗುಡ್ ನ್ಯೂಸ್ : `SCSP/TSP’ ಫಲಾನುಭವಿಗಳಿಗೆ ಅನುದಾನ 1 ಲಕ್ಷ ರೂ.ಗೆ...

ಕೊಳಗೇರಿ ನಿವಾಸಿಗಳಿಗೆ ಭರ್ಜರಿ ಗುಡ್ ನ್ಯೂಸ್ : `SCSP/TSP’ ಫಲಾನುಭವಿಗಳಿಗೆ ಅನುದಾನ 1 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು : ಕೊಳಗೇರಿ ನಿವಾಸಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೊಳಗೇರಿ ನಿಗಮದ ಎಸ್ ಸಿಎಸ್ ಪಿ/ಟಿಎಸ್ ಪಿ ಫಲಾನುಭವಿಗಳ ಅನುದಾನವನ್ನು 1 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.

ಎಸ್ ಸಿಎಸ್ ಪಿ/ಟಿಎಸ್ ಪಿ ಅನುದಾನ ಬಳಕೆಯ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು  ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಎಸ್ ಸಿಎಸ್ ಪಿ/ಟಿಎಸ್ ಪಿ ಫಲಾನುಭವಿಗಳಿಗೆ ಈವರೆಗೆ ಇದ್ದ 75,000 ರೂ. ಅನುದಾನವನ್ನು 1 ಲಕ್ಷ ರೂ.ಗೆ ಏರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಬದುಕಿಗೆ ನೆರವಾಗುವ ನಿಟ್ಟಿನಲ್ಲಿ ಪಶು ಸಂಗೋಪನಾ ಇಲಾಖೆಯಡಿ ಎರಡು ಹಸುಗಳನ್ನು ನೀಡುವ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶ ನೀಡಿದ್ದು, ಪಶುಭಾಗ್ಯ ಯೋಜನೆಯ ಪ್ರಸ್ತಾವನೆಗೆ ಅನುಮೋದನೆ ಪಡೆದು ಕಾರ್ಯ ನಿರ್ವಹಿಸುವುದಾಗಿ ಅಧಿಕಾರಿಗಳು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular