ಪ್ಯಾಲೆಸ್ತೀನ್ ಪರ ಸ್ಟೇಟಸ್ ಹಾಕಿದ ಯುವಕ ವಶಕ್ಕೆ

ಹೊಸಪೇಟೆ: ಪ್ಯಾಲೇಸ್ತೀನ್ ಪರವಾಗಿ ಬರಹ ಮತ್ತು ವಿಡಿಯೋ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಯುವಕನನ್ನು ಹೊಸಪೇಟೆ ಠಾಣೆ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.

ಹೊಸಪೇಟೆಯ ಸಿದ್ದಲಿಂಗಪ್ಪ ಚೌಕಿ ನಿವಾಸಿ ಆಲಂಪಾಷಾ(20) ಎಂಬ ಯುವಕನನ್ನು ವಶಕ್ಕೆ ಪಡೆಯಲಾಗಿದೆ. ಈತ ಪ್ಯಾಲೆಸ್ತೀನ್ ಪರ ಇರುವ ಬರಹ ಮತ್ತು ವಿಡಿಯೋವನ್ನು ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ. ಇದನ್ನು ಗಮನಿಸಿದ ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸರು ಕ್ರಮಕೈಗೊಂಡಿದ್ದಾರೆ.

ನಗರದಲ್ಲಿ ಶಾಂತಿಭಂಗ ಉಂಟು ಮಾಡುವ ಪ್ರಕರಣಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಕರಣ ದಾಖಲಿಸಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read