HomeLatest Newsಹಿರಿಯ ನಾಗರಿಕ ಸ್ನೇಹಿಯಾಗಲಿದೆ `ಅನ್ನಭಾಗ್ಯ’ : 75 ವರ್ಷ ದಾಟಿದವರ ಮನೆಗೆ ತಲುಪಲಿದೆ ಪಡಿತರ

ಹಿರಿಯ ನಾಗರಿಕ ಸ್ನೇಹಿಯಾಗಲಿದೆ `ಅನ್ನಭಾಗ್ಯ’ : 75 ವರ್ಷ ದಾಟಿದವರ ಮನೆಗೆ ತಲುಪಲಿದೆ ಪಡಿತರ

ಬೆಂಗಳೂರು  : ರಾಜ್ಯ ಸರ್ಕಾರ ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಪಡಿತರವನ್ನು 75 ವರ್ಷ ದಾಟಿದವರ ಮನೆ ಬಾಗಿಲಿಗೇ ತಲುಪಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ. ಒಂಟಿ ವೃದ್ಧರು, 75 ದಾಟಿದ ದಂಪತಿಗಳಿಗೆ ಮೊದಲ ಪ್ರಾಶಸ್ತ್ಯ ನೀಡುತ್ತಿದೆ.

ಹೌದು, ಪಡಿತರ ವಿತರಣೆಯಲ್ಲಿ ಹಿರಿಯ ನಾಗರಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಮದ ಆಹಾರ ಇಲಾಕೆ ಕ್ರಮ ಕೈಗೊಂಡಿದ್ದು, ಪಡಿತರ ಕಾರ್ಡ್ ಹೊಂದಿರುವ ಕುಟುಂಬದ ಸದಸ್ಯರೊಬ್ಬರು ನ್ಯಾಯಬೆಲೆ ಅಂಗಡಿಗೆ ಹೋಗಿ ಬಯೋಮೆಟ್ರಿಕ್ ನೀಡಿದ ನಂತರ ತಮ್ಮ  ಕುಟುಂಬಕ್ಕೆ ನಿಗದಿಪಡಿಸಿದ ಅಕ್ಕಿ ಸೇರಿ ಪಡಿತರ ಪಡೆದುಕೊಳ್ಳಬೇಕಿದೆ. ಹಿರಿಯರು ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗೆ ಹೋಗಲು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಮನೆ ಬಾಗಿಲಿಗೆ ಪಡಿತರ ತಲುಪಿಸಲು ಯೋಜನೆ ರೂಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಡಿತರ ಚೀಟಿಯಲ್ಲಿ ನಮೂದಿಸಿದಂತೆ 75 ವರ್ಷ ಒಳಗಿನ ಸದಸ್ಯರು ಇಲ್ಲವೆ, 75 ವರ್ಷದ ದಾಟಿದ ವೃದ್ಧರು, ದಂಪತಿಗಳಿಗೆ ಮನೆ ಬಾಗಿಲಿಗೆ ಪಡಿತರ ಪೂರೈಸಲು ಆಹಾರ ಇಲಾಖೆ ಮುಂದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular