
ಪುರಭವನದಲ್ಲಿ ಮಹಿಷ ದಸರಾ ಆಚರಿಸಲು ಅನುಮತಿ ನೀಡಿದ್ದು, ವೇದಿಕೆ ಕಾರ್ಯಕ್ರಮಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ಪ್ರಚೋದನಕಾರಿ ಭಾಷಣ ಮಾಡದಂತೆ ಎಚ್ಚರಿಕೆಯನ್ನೂ ನೀಡಲಾಗಿದೆ.
ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರಿನ ಪುರಭವನ ಹಾಲ್ ಹೊರತುಪಡಿಸಿ ಮೈಸೂರು ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.ಇಂದಿನಿಂದ ಅ.14ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ.

