HomeAgricultureರೈತರೇ ಗಮನಿಸಿ : ಕೃಷಿ ಇಲಾಖೆಯ ವಿವಿಧ ಸೌಲಭ್ಯ ಪಡೆಯಲು ರೈತ ಗುರುತಿನ ಸಂಖ್ಯೆ ಕಡ್ಡಾಯ

ರೈತರೇ ಗಮನಿಸಿ : ಕೃಷಿ ಇಲಾಖೆಯ ವಿವಿಧ ಸೌಲಭ್ಯ ಪಡೆಯಲು ರೈತ ಗುರುತಿನ ಸಂಖ್ಯೆ ಕಡ್ಡಾಯ

ಬೆಂಗಳೂರು :  ರೈತರು ಬೆಳೆ ವಿಮೆ ನೊಂದಣಿ ಮಾಡಲು, ಕನಿಷ್ಟ ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನ ಮಾರಾಟ ಮಾಡಲು, ಬೆಳೆ ಸಾಲ ಪಡೆಯಲು, ಬೆಳೆ ಹಾನಿಗೆ ಪರಿಹಾರ ಪಡೆಯಲು ಹಾಗೂ ಕೃಷಿ ಇಲಾಖೆಯಿಂದ ಇತರೆ ಸೌಲಭ್ಯ ಪಡೆಯಲು ರೈತರ ಗುರುತಿನ ಸಂಖ್ಯೆ (ಎಫ್‍ಐಡಿ) ಕಡ್ಡಾಯವಾಗಿದೆ.

ರೈತರ ಗುರುತಿನ ಸಂಖ್ಯೆ (ಎಫ್‍ಐಡಿ) ಮಾಡಿಸದ ರೈತರು ಕೂಡಲೇ ಕೃಷಿ ಅಥವಾ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ತಮ್ಮ ಆಧಾರ್‍ಕಾರ್ಡ್, ಪಹಣಿ, ಬ್ಯಾಂಕ್ ಪಾಸ್‍ಬುಕ್, ಮೊಬೈಲ್ ಸಂಖ್ಯೆಯೊಂದಿಗೆ ತೆರಳಿ ನೊಂದಣಿ ಮಾಡಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ವೆ ನಂಬರ್‍ ದಾಖಲಿಸಿದ ಜಮೀನಿನ ವಿಸ್ತೀರ್ಣಗಳಿಗೆ ಮಾತ್ರ ಸರ್ಕಾರದ ಪರಿಹಾರ ಸೌಲಭ್ಯ ದೊರೆಯುವುದರಿಂದ ರೈತ ಬಾಂಧವರು ತಾವು ಹೊಂದಿರುವ ಎಲ್ಲ ಜಮೀನಿನ ಸರ್ವೇ ನಂಬರ್‍ನ ವಿಸ್ತೀರ್ಣಗಳನ್ನು ಕೂಡಲೇ ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಬೇಕು ಎಂದು ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.

For Latest News Updates, Join Our Whatsapp Community🚩
RELATED ARTICLES

Most Popular