ಇಂದಿನಿಂದ 3 ದಿನ ಮೈಸೂರು ಜಿಲ್ಲೆಯಲ್ಲಿ ‘ಸಿಎಂ ಸಿದ್ದರಾಮಯ್ಯ’ ಪ್ರವಾಸ, ಇಲ್ಲಿದೆ ವೇಳಾಪಟ್ಟಿ

ಮೈಸೂರು : ಇಂದಿನಿಂದ ಮೂರು ದಿನ ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದಾರೆ.

ಸಂಜೆ 5.30ಕ್ಕೆ ಬೆಂಗಳೂರಿಂದ ರಸ್ತೆ ಮೂಲಕ ಮೈಸೂರಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ 3 ದಿನ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇದೇ ವೇಳೆ ಮೈಸೂರಿನಲ್ಲಿ ನಡೆಯಲಿರುವ ವಿವಿಧ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಂದು ರಾತ್ರಿ ಮೈಸೂರಿನಲ್ಲಿಯೇ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿದು ಬಂದಿದೆ.

ನಾಳೆ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದು, ಬೆಳಿಗ್ಗೆ 10.15ಕ್ಕೆ ಸಿಎಂ ಸಿದ್ದರಾಮಯ್ಯ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಲಿದ್ದಾರೆ. ಸಂಜೆ 4 ಗಂಟೆಗೆ ದೇವರಾಜ ಅರಸು ವಿವಿದೊದ್ದೇಶ ಕ್ರೀಡಾಂಗಣದಲ್ಲಿ ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟನೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ನಂತರ ರಾತ್ರಿ 7ಕ್ಕೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

ಅ.16 ರವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಿಎಂ ಸಿದ್ದರಾಮಯ್ಯ ಅ.16ರ ಸಂಜೆ 5.55ಕ್ಕೆ ಮೈಸೂರಿನಿಂದ ಸಿಎಂ ವಾಪಸ್ ಆಗಲಿದ್ದಾರೆ.. ಮೈಸೂರಿನ ಮಂಡಕಹಳ್ಳಿ ಏರ್ಪೋರ್ಟ್ನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read