
ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಶಾಸಕಿ ರೂಪಕಲಾ ಶಶಿಧರ್ ನೇತೃತ್ವದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿತ್ತು, ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕೆಲವರು ಶಾಸಕಿ ಹಾಗೂ ಜೆಸಿಬಿ ಮೇಲೆ ಕಲ್ಲು ತೂರಲು ಮುಂದಾಗಿದ್ದಾರೆ. ನಂತರ ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ತಡೆದು ಅನಾಹುತ ತಪ್ಪಿಸಿದ್ದಾರೆ. ಕಲ್ಲು ತೂರಾಟ ನಡೆಸಲು ಮುಂದಾಗಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

