ಬೆಂಗಳೂರು : ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯವಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಸತತ 42 ಗಂಟೆಗಳಿಂದ ನಡೆಯುತ್ತಿದ್ದ ಐಟಿ ದಾಳಿ ಅಂತ್ಯವಾಗಿದ್ದು, ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಮೆಟ್ರೋ ಕಾರ್ಪ್ ಕಂಪನಿ ಪಾಲುದಾರರಾಗಿರುವ ಪ್ರಮೋದ್, ಪ್ರದೀಪ್ಗೆ ಐಟಿಯಿಂದ ನೋಟಿಸ್ ನೀಡಲಾಗಿದೆ.
ಐಟಿ ದಾಳಿ ಬಗ್ಗೆ ಅಂಬಿಕಾಪತಿ ಪುತ್ರ ಪ್ರದೀಪ್ ಪ್ರತಿಕ್ರಿಯೆ ನೀಡಿದ್ದು, 15 ವರ್ಷಗಳಿಂದ ರಿಯಲ್ ಎಸ್ಟೇಟ್ ಹಾಗೂ ಹಲವು ಬ್ಯುಸಿನೆಸ್ ಮಾಡುತ್ತಿದ್ದೇವೆ. ಹಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ನೀಡಿ ಬಿಡಿಸಿಕೊಳ್ಳುತ್ತೇವೆ ಎಂದು ಪುತ್ರ ಪ್ರದೀಪ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ಮೈದುನನ ಮನೆಯಲ್ಲಿ ಬರೋಬ್ಬರಿ 40 ಕೋಟಿ ರೂಪಾಯಿ ಪತ್ತೆಯಾಗಿತ್ತು. ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಅವರ ಮೈದುನ ಪ್ರದೀಪ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಪತಿ ಅಂಬಿಕಾಪತಿ ಸಹೋದರ ಪ್ರದೀಪ್ ಗೆ ಸೆರಿದ ಆರ್.ಟಿ.ನಗರದ ಫ್ಲಾಟ್ ಗಳ ಮೇಲೆ ದಾಳಿ ನಡೆಸಲಾಗಿದ್ದು, ಬೆಡ್ ರೂಮ್ ನ ಮಂಚದ ಕೆಳಗೆ 23 ಬಾಕ್ಸ್ ಗಳಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿತ್ತು.