HomeLatest NewsBIG BREAKING: ಹೈವೋಲ್ಟೇಜ್ ವಿಶ್ವಕಪ್ ಪಂದ್ಯದಲ್ಲಿ ಪಾಕ್ ಬಗ್ಗುಬಡಿದ ಭಾರತಕ್ಕೆ ಭರ್ಜರಿ ಜಯ

BIG BREAKING: ಹೈವೋಲ್ಟೇಜ್ ವಿಶ್ವಕಪ್ ಪಂದ್ಯದಲ್ಲಿ ಪಾಕ್ ಬಗ್ಗುಬಡಿದ ಭಾರತಕ್ಕೆ ಭರ್ಜರಿ ಜಯ

ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ 7 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಭಾರತದ ಬೌಲರ್ ಗಳ ಸಂಘಟಿತ ದಾಳಿಗೆ ತತ್ತರಿಸಿ 42.5 ಓವರ್ ಗಳಲ್ಲಿ 191 ರನ್ ಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಪಾಕಿಸ್ತಾನ ಪರವಾಗಿ ಬಾಬರ್ ಆಜಂ 50, ಮಹಮ್ಮದ್ ರಿಜ್ವಾನ್ 49, ಇಮಾಮ್ ಉಲ್ ಹಕ್ 36 ರನ್ ಗಳಿಸಿದರು. ಭಾರತದ ಪರ ಬೂಮ್ರಾ, ಮಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ರವೀದ್ರ ಜಡೇಜ ತಲಾ 2 ವಿಕೆಟ್ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೆಲುವಿನ ಗುರಿ ಬೆನ್ನತ್ತಿದ ಭಾರತ 30.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿ ಗೆಲುವಿನ ನಗೆ ಬೀರಿದೆ. ರೋಹಿತ್ ಶರ್ಮಾ 86, ಶುಭಮನ್ ಗಿಲ್ 16, ವಿರಾಟ್ ಕೊಹ್ಲಿ 16, ಶ್ರೇಯಸ್ ಅಯ್ಯರ್ ಅಜೇಯ 53, ಕೆ.ಎಲ್. ರಾಹುಲ್ ಅಜೇಯ 19 ರನ್ ಗಳಿಸಿದರು. ಪಾಕ್ ಪರ ಶಾಹಿನ್ ಅಫ್ರಿದಿ 2, ಹಸನ್ ಅಲಿ 1 ವಿಕೆಟ್ ಪಡೆದರು.

ಈ ಮೂಲಕ ಭಾರತ ವಿಶ್ವಕಪ್ ನಲ್ಲಿ 8 ನೇ ಬಾರಿಗೆ ಪಾಕಿಸ್ತಾನದ ವಿರುದ್ಧ ಜಯಗಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular