ಹರಪನಹಳ್ಳಿ : ವಿಜಯನಗರ ಜಿಲ್ಲೆಯಲ್ಲಿ ಘೋರ ಘಟನೆಯೊಂದ ನಡೆದಿದ್ದು, ಮಹಿಳೆಯೊಬ್ಬಳು ತನ್ನ ಮಗಳನ್ನು ದೊಣ್ಣೆಯಿಂದ ಹೊಡೆದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹುಲಿಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಶಫಿನಾಜ್ ಎಂಬ ಮಹಿಳೆ ತನ್ನ ಮಗಳು ಶಮಾಭಾನುಗೆ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದಾಳೆ. ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಲ್ಲಿ ಪುತ್ರ ಅಮಾನುಲ್ಲಾಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವಿಜಯನಗರ ಎಸ್ ಪಿ ಹರಿಬಾಬು ಭೇಟಿ ನೀಡಿದ್ದು, ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.