HomeKarnatakaBIGG NEWS : ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 13,352 ಶಿಕ್ಷಕರಿಗೆ...

BIGG NEWS : ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 13,352 ಶಿಕ್ಷಕರಿಗೆ `ನೇಮಕಾತಿ ಪತ್ರ’

ಬೆಂಗಳೂರು : ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಇದರೊಂದಿಗೆ 13,352 ಶಿಕ್ಷಕರ ನೇಮಕ ಸಂಬಂಧ ಶಿಕ್ಷಣ ಇಲಾಖೆಯು ಸಿದ್ಧತೆ ಮಾಡಿಕೊಂಡಿದೆ.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಆಯ್ಕೆಯಾಗಿರುವ ಅರ್ಹ 13,352 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲು ಶಾಲಾ ಶಿಕ್ಣ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2022 ರ ನವೆಂಬರ್ ನಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಆದರೆ ತಂದೆಯ ಆದಾಯ ಪ್ರಮಾಣಪತ್ರವನ್ನು ಸಲ್ಲಿಸಿದ್ದರು ಎಂಬ ಕಾರಣಕ್ಕೆ ಆಯ್ಕೆ ಪಟ್ಟಿಯಲ್ಲಿದ್ದ 998 ವಿವಾಹಿತ ಮಹಿಳಾ ಅಭ್ಯರ್ಥಿಗಳಿಗೆ ಹುದ್ದೆ ಕೈತಪ್ಪಿತ್ತು. ಈ ಸಂಬಂಧ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಪ್ರಕರಣ ಸುಖಾಂತ್ಯವಾಗಿದ್ದು, ಶೀಘ್ರವೇ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ಸಿಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular