ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ದಸರಾ ಹಬ್ಬಕ್ಕೆ ಬಿಗ್ ಶಾಕ್, ಅಕ್ಕಿ,, ಗೋದಿ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಅಕ್ಕಿ ಮತ್ತು ಗೋಧಿ ಬೆಲೆಯಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದ್ದು, ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದೀಗ ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. 25 ಕೆಜಿ ಅಕ್ಕಿ ಮೂಟೆ ಬೆಲೆ 13,00 ರೂ.ನಿಂದ 1600 ರೂ.ವರೆಗೆ ಏರಿಕೆಯಾದ್ರೆ, ಗೋಧಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಪ್ರತಿ ಕ್ವಿಂಟಾಲ್ ಗೆ 200 ರೂ. ನಿಂದ 300 ರೂ. ನಷ್ಟು ಹೆಚ್ಚಳವಾಗಿದೆ.
ಭಾರತ ಮಾತ್ರವಲ್ಲದೆ ವಿಶ್ವದ ಪ್ರಮುಖ ದೇಶಗಳಲ್ಲಿ ಅಕ್ಕಿ ದರ ಭಾರಿ ಏರಿಕೆ ಕಂಡಿದೆ. ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ಎಒ) ಸರಾಸರಿ ಆಹಾರ ದರ ಸೂಚ್ಯಂಕದ ಪ್ರಕಾರ ಜಾಗತಿಕ ಮಾರುಕಟ್ಟೆಯಲ್ಲಿ ಅಕ್ಕಿಯ ದರ ಶೇ.9.8ರಷ್ಟು ಏರಿಕೆಯಾಗಿದೆ. ಇದು ಕಳೆದ 15 ವರ್ಷಗಳಲ್ಲೇ ಗರಿಷ್ಠ ಮಟ್ಟವಾಗಿದೆ.
ಕರ್ನಾಟಕ ಮಾತ್ರವಲ್ಲದೆ ಇಡೀ ದೇಶದ ಪರಿಸ್ಥಿತಿ ಮಳೆಯಿಲ್ಲದೆ ಸಂಕಷ್ಟಕ್ಕೆ ಸಿಲುಕಿದೆ. ಸದ್ಯದ ಸ್ಥಿತಿಯನ್ನು ಅವಲೋಕಿಸಿದರೆ ಈ ಬಾರಿ ರಾಜ್ಯದಲ್ಲಿ ಶೇ. 50ರಷ್ಟು ಭತ್ತದ ಬೆಳೆಯನ್ನು ನಿರೀಕ್ಷಿಸಬಹುದು. ಮುಂದಿನ ವರ್ಷ ಅಕ್ಕಿಯ ಕೊರತೆ ಬಾಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.