HomeKarnatakaBIG NEWS: ಬಿಪಿಎಲ್, ಅಂತ್ಯೋದಯ ಕಾರ್ಡ್ ಇದ್ರೂ, ಉಚಿತವಾಗಿ ಕೊಟ್ರೂ ಪಡಿತರ ಪಡೆಯದ 3.47 ಲಕ್ಷ...

BIG NEWS: ಬಿಪಿಎಲ್, ಅಂತ್ಯೋದಯ ಕಾರ್ಡ್ ಇದ್ರೂ, ಉಚಿತವಾಗಿ ಕೊಟ್ರೂ ಪಡಿತರ ಪಡೆಯದ 3.47 ಲಕ್ಷ ಫಲಾನುಭವಿಗಳು

ಬೆಂಗಳೂರು: ಉಚಿತ ಆಹಾರಧಾನ್ಯ, ಖಾತೆಗೆ ಹೆಚ್ಚುವರಿ ಅಕ್ಕಿಯ ಹಣ ಮೊದಲಾದ ಸೌಲಭ್ಯಗಳಿಗಾಗಿ ಬಿಪಿಎಲ್, ಅಂತ್ಯೋದಯ ಕಾರ್ಡ್ ಪಡೆದುಕೊಳ್ಳಲು ಹೆಚ್ಚಿನವರು ಮುಂದಾಗುತ್ತಾರೆ.

ಆದರೆ, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಇದ್ದರೂ 3.47 ಲಕ್ಷ ಫಲಾನುಭವಿಗಳು ನ್ಯಾಯಬೆಲೆ ಅಂಗಡಿಗಳಿಂದ ಆಹಾರ ಧಾನ್ಯವನ್ನೇ ಪಡೆದುಕೊಂಡಿಲ್ಲ. ಅಂತ್ಯೋದಯ ಕಾರ್ಡ್ ದಾರರಿಗೆ 35 ಕೆಜಿ ಅಕ್ಕಿ, ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಅಕ್ಕಿ ಮತ್ತು ಹೆಚ್ಚುವರಿ 5 ಕೆಜಿ ಅಕ್ಕಿ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ 10.88 ಲಕ್ಷ ಅಂತ್ಯೋದಯ ಕಾರ್ಡ್ ದಾರರಲ್ಲಿ 14,826 ಮಂದಿ ಪಡಿತರ ಪಡೆದುಕೊಂಡಿಲ್ಲ. 1.16 ಕೋಟಿ ಬಿಪಿಎಲ್ ಕಾರ್ಡ್ ದಾರರ ಪೈಕಿ 3.32 ಲಕ್ಷ ಬಿಪಿಎಲ್ ಕಾರ್ಡ್ ಫಲಾನುಭವಿಗಳು ಆರು ತಿಂಗಳಿನಿಂದ ಆಹಾರ ಧಾನ್ಯ ಪಡೆದುಕೊಂಡಿಲ್ಲ. ಖಾತೆಗೆ ಹೆಚ್ಚುವರಿ ಅಕ್ಕಿಯ ಹಣ ಪಡೆಯಲು ದಾಖಲೆ ಕೂಡ ಸಲ್ಲಿಸಿಲ್ಲ ಎಂದು ಹೇಳಲಾಗಿದೆ.

ಕೆಲವರು ಪಿಂಚಣಿ, ಕಿಸಾನ್ ಸಮಾನ್ ಯೋಜನೆ ಸಹಾಯಧನ ಮೊದಲಾದ ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಬಿಪಿಎಲ್ ಕಾರ್ಡ್ ಮಾಡಿಸಿಕೊಂಡಿದ್ದಾರೆ. ಆದರೆ, ಪಡಿತರ ಪಡೆದುಕೊಳ್ಳುತ್ತಿಲ್ಲ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular