ಹುಬ್ಬಳ್ಳಿ: ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಐಟಿ ರೇಡ್ ನಡೆದಿದೆ. ಒಬ್ಬರ ಮನೆಯಲ್ಲಿ 42 ಕೋಟಿ ಇನ್ನೊಬ್ಬರ ಮನೆಯಲ್ಲಿ 45 ಕೋಟಿ ಸಿಕ್ಕಿದೆ. ಬಿಲ್ಡರ್ ಸಂತೋಷ್ ಸ್ಪಷ್ಟವಾಗಿ ಹೇಳಿದ್ದಾರೆ ಇಂದು ಕಾಂಗ್ರೆಸ್ ಮುಖಂಡರ ದುಡ್ಡು ಎಂದು. ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಎಂಬುದು ಮತ್ತೆ ಸಾಬೀತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿ ಮಾತನಾಡಿದ ಪ್ರಹ್ಲಾದ್ ಜೋಶಿ, ಐಟಿ ದಾಳಿಯಲ್ಲಿ ಸಿಕ್ಕ ಹಣ ಕಾಂಗ್ರೆಸ್ ನ ಭ್ರಷ್ಟಾಚಾರದ ಹಣ. ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್ ಎಂದು ಕಿಡಿ ಕಾರಿದ್ದಾರೆ.
ಇದು ಕಮಿಷನ್ ಹಣ ಎಂಬ ಆರೋಪವಿದೆ. ಸತ್ಯ ಹರಿಶ್ಚಂದ್ರ ಎಂಬ ರೀತಿಯಲ್ಲಿ ಪೋಸ್ ಕೊಟ್ಟಿದ್ದರು. ಈಗ ಪತ್ತೆಯಾದ ಹಣದ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಎಂಬುದು ಸ್ಪಷ್ಟವಾಗಿದೆ. ಪತ್ತೆಯಾದ ಕೋಟಿ ಕೋಟಿ ಹಣದ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಪಂಚರಾಜ್ಯ ಚುನಾವಣೆಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಣ ಸಂಗ್ರಹಿಸಲು ಹೊರಟಿದೆ. ನನಗಿರುವ ಮಾಹಿತಿ ಪ್ರಕಾರ 1000ಕೋಟಿ ಸಂಗ್ರಹಿಸಲು ಮುಂದಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.